ಕರಾವಳಿ

ಶಿವಮೊಗ್ಗ ಹಲ್ಲೆ ಪ್ರಕರಣ – ಕಸಾಯಿಗಳ ಕೈವಾಡ : ಹಿಂದೂ ಜನಜಾಗೃತಿ ಸಮಿತಿ ಆರೋಪ

Pinterest LinkedIn Tumblr

ಮಂಗಳೂರು, ಡಿಸೆಂಬರ್.04 : ಶಿವಮೊಗ್ಗ ನಗರ ಬಜರಂಗದಳದ ಸಹಕಾರ್ಯದರ್ಶಿ ನಾಗೇಶರವರ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸ ಬೇಕು, ಹಾಗೇಯೇ ಹಲ್ಲೆಗೊಳಗಾಗಿರುವ ನಾಗೇಶರವರಿಗೆ ಸೂಕ್ತ ರಕ್ಷಣೆ ನೀಡ ಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ.

ಗುರವಾರ ಶಿವಮೊಗ್ಗ ನಗರ ಬಜರಂಗದಳದ ಸಹ ಕಾರ್ಯದರ್ಶಿ ನಾಗೇಶರವರು ವಾಯು ವಿಹಾರಕ್ಕೆ ಹೋದಾಗ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾದ ಹಲ್ಲೆ ನಡೆಸಿದ್ದಾರೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.

ಇದು ಕಸಾಯಿಗಳದ್ದೇ ಕೈವಾಡವಾಗಿದೆ. ಶಿವಮೊಗ್ಗ ನಗರದಲ್ಲಿ ಅಕ್ರಮ ಕಸಾಯಿಖಾನೆ, ಅಕ್ರಮ ಗೋಸಾಗಾಟ ಹೆಚ್ಚಳವಾಗಿದೆ. ನಾಗೇಶ ಸೇರಿ ಅನೇಕರು ಇಂತಹ ಅಕ್ರಮ ಗೋಸಾಗಾಟ, ಅಕ್ರಮ ಕಸಾಯಿಖಾನೆಗಳ ವಿರುದ್ಧ ಅನೇಕ ಹೋರಾಟಗಳನ್ನು ಮಾಡಿದ್ದರು. ಅದಕ್ಕಾಗಿ ಕಸಾಯಿಗಳೇ ನಾಗೇಶರವರ ಮೇಲೆ ಹಲ್ಲೆ ನಡೆಸಿರುವ ಸಾಧ್ಯತೆ ಇದೆ.

ದುಷ್ಕರ್ಮಿಗಳನ್ನು ಈ ಕೂಡಲೇ ಬಂಧಿಸಬೇಕು, ಅವರ ಮೇಲೆ ಕಠಿಣ ಕ್ರಮ ಜರುಗಿಸಬೇಕು ಮತ್ತು ನಾಗೇಶರವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸುತ್ತದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಆದಷ್ಟು ಬೇಗ ಗೋಹತ್ಯೆ ನಿಷೇಧ ಕಾಯಿದೆಯನ್ನು ಜಾರಿಗೆ ತರಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸುತ್ತದೆ ಎಂದವರು ಹೇಳಿದ್ದಾರೆ.

Comments are closed.