ಮಂಗಳೂರು ಡಿಸೆಂಬರ್ : ಕೊವೀಡ್-19 ಲಾಕ್‍ಡೌನ್‍ನಿಂದಾಗಿ ಮಂಗಳೂರಿನ ಕದ್ರಿ ಜಿಂಕೆ ಉದ್ಯಾವನದ ಲೇಸರ್ ಶೋ ಸಂಗೀತ ಕಾರಂಜಿ ವೀಕ್ಷಣೆಗೆ ಸಾರ್ವಜನಿಕ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು.
ಇದೀಗ ಡಿಸೆಂಬರ್ ತಿಂಗಳ ಶನಿವಾರ ಮತ್ತು ಭಾನುವಾರ ಮಾತ್ರ ಲೇಸರ್ ಶೋ ಸಂಗೀತ ಕಾರಂಜಿ ವೀಕ್ಷಣೆಗೆ ಸಾರ್ವಜನಿಕ ಪ್ರವೇಶಕ್ಕೆ ತಾತ್ಕಲಿಕವಾಗಿ ಅವಕಾಶವನ್ನು ಕಲ್ಪಿಸಲಾಗಿದೆ.
ಲೇಸರ್ ಶೋ ಸಂಗೀತ ಕಾರಂಜಿ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರು ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಪಾಲಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ತಿಳಿಸಿದ್ದಾರೆ.