ನವದೆಹಲಿ, ಡಿಸೆಂಬರ್.07 : ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರೋಧಿಸಿ ಡಿಸೆಂಬರ್ 8 ಕ್ಕೆ ರೈತರು ಕರೆ ನೀಡಿರುವ ‘ಭಾರತ್ ಬಂದ್’ಗೆ ಯಾರೆಲ್ಲಾ ಬೆಂಬಲ ನೀಡಿದ್ದಾರೆ ಎಂಬ ವಿವರ ಇಲ್ಲಿದೆ.
ಕೇಂದ್ರದ ಹೊಸ ಕೃಷಿ ಕಾಯ್ದೆ ವಿರೋಧಿಸಿ ಸಾವಿರಾರು ರೈತರು ಕಳೆದ 11 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಸರಕಾರದ ಜತೆ ಮಾತುಕತೆ ಗಳು ಫಲ ಿಸಿದ್ದರಿಂದ ಪ್ರತಿಭಟನಾನಿರತ ರೈತರು ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದು ಮಾಡುವಂತೆ ರೈತ ಸಂಘಟನೆಗಳು ಡಿಸೆಂಬರ್ 8 ರ ನಾಳೆಯ ಭಾರತ್ ಬಂದ್ಗೆ ಕಾಂಗ್ರೆಸ್ ಮತ್ತು ತೆಲಂಗಾಣ ರಾಷ್ಟ್ರೀಯ ಸಮಿತಿ ಬೆಂಬಲ ವ್ಯಕ್ತಪಡಿಸಿದೆ. ಇದೇ ವೇಳೆ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ಬೆಂಬಲ ನೀಡಿದ್ದು, ನಾಳೆ ಆನ್ ಲೈನ್ ಕ್ಲಾಸ್ ನಡೆಯುವುದಿಲ್ಲ ಎಂದು ತಿಳಿಸಿವೆ.
ಇನ್ನೂ, ದೆಹಲಿ, ಪಂಜಾಬ್, ಹರಿಯಾಣ. ಉತ್ತರ ಪ್ರದೇಶ, ಮಹಾರಾಷ್ಟ್ರ, ಚಂಡೀಗಢ, ಮಧ್ಯಪ್ರದೇಶ, ಒಡಿಶಾ, ತಮಿಳುನಾಡು. ಕರ್ನಾಟಕ ಸೇರಿದಂತೆ ವಿವಿಧ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿದೆ. ಕೃಷಿ ಕಾಯಿದೆ ಗಳ ವಿರುದ್ಧ ರೈತರು ಕರೆ ನೀಡಿರುವ ಭಾರತ್ ಬಂದ್ ಅಥವಾ ರಾಷ್ಟ್ರವ್ಯಾಪಿ ಮುಷ್ಕರ ಮಂಗಳವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ನಡೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನ ವಕ್ತಾರರು ತಿಳಿಸಿದ್ದಾರೆ.
ರಾಜ್ಯದಲ್ಲೂ ಹಸಿರು ಸೇನೆ, ರಾಜ್ಯ ರೈತ ಸಂಘ ಸೇರಿದಂತೆ ಹಲವು ರೈತ ಸಂಘಟನೆಗಳು ಭಾರತ್ ಬಂದ್ ಗೆ ಬೆಂಬಲ ಸೂಚಿಸಿವೆ. ಭಾರತ್ ಬಂದ್ ಗೆ ಓಲಾ ಊಬರ್ ಹಾಗೂ ಆಟೋ ಚಾಲಕರ ಸಂಘ ನೈತಿಕ ಬೆಂಬಲ ಸೂಚಿಸಿವೆ. ಅಂಗನವಾಡಿ ಕಾರ್ಯಕರ್ತೆಯರು ಕೂಡ ಬಂದ್ ಗೆ ಬೆಂಬಲಿಸಿ ಸಾಥ್ ನೀಡಿದ್ದಾರೆ.
ಮಂಗಳವಾರ ಬೆಳಗ್ಗೆಯಿಂದಲೇ ಎಲ್ಲಾ ಅಂಗಡಿ ಮುಂಗಟ್ಟುಗಳು ಮುಚ್ಚಿರಲಿದೆ. ಮಧ್ಯಾಹ್ನದ ನಂತರ ಸಾರಿಗೆ ವ್ಯವಸ್ಥೆ ಆರಂಭಗೊಂಡರೂ ಅಂಗಡಿ ಬಂದ್ ಆಗಿರಲಿದೆ. ಆದರೆ ಮದುವೆ ಸಮಾರಂಭಕ್ಕೆ ಮಾತ್ರ ವಿನಾಯಿತಿ ಇರಲಿದೆ. ಅಂದು ನಡೆಯಲಿರುವ ಮದುವೆ ಸಮಾರಂಭಕ್ಕೆ ರೈತರು ಅಡ್ಡಿ ಮಾಡುವುದಿಲ್ಲ ಎಂದು ರೈತ ಮುಖಂಡರು ಸ್ಪಷ್ಟನೆ ನೀಡಿದ್ದಾರೆ.
ಬಂದ್ಗೆ ಬೆಂಬಲ ನೀಡಿರುವ ಇನ್ನಿತರ ಸಂಘಟನೆಗಳು :
ಕನ್ನಡಪರ ಸಂಘಟನೆಗಳು-ವಾಟಾಳ್ ಬಣ, ಕಾರ್ಮಿಕ ಸಂಘಟನೆ, ಓಲಾ ಊಬರ್ ಟ್ಯಾಕ್ಸಿ ಅಸೋಸಿಯೇಷನ್, ರಾಜ್ಯ ಬದಿ ಬೀದಿ ವ್ಯಾಪಾರಿಗಳ ಸಂಘಟನೆ, ಬ್ಯಾಂಕ್ ನೌಕರರ ಒಕ್ಕೂಟ. ಆಫೀಸರ್ಸ್ ಯೂನಿಯನ್, ಆಲ್ ಇಂಡಿಯಾ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಷನ್
ನಾಳೆ ಏನೆಲ್ಲಾ ಇರುತ್ತೆ?
ನಾಳೆ ಪೆಟ್ರೋಲ್ ಡೀಸೆಲ್ ಸಿಗಲಿದೆ, ಬಾರ್ ಅಂಡ್ ರೆಸ್ಟೋರೆಂಟ್, ಮದ್ಯದ ಅಂಗಡಿ ಓಪನ್ ಇರಲಿದೆ’, ಬೀದಿ ಬದಿ ವ್ಯಾಪಾರ ಇರಲ್ಲ, ಬಿಎಂಟಿಸಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ಸೇವೆ ಇರುವ ಬಗ್ಗೆ ಸ್ಪಷ್ಟವಾಗಿಲ್ಲ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.