ಕರ್ನಾಟಕ

ದಿ. ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ಪರಿವಾರಕ್ಕೆ ಕೊರೋನಾಘಾತ

Pinterest LinkedIn Tumblr

ಬೆಂಗಳೂರು : ದಿವಂಗತ ಚಿರಂಜೀವಿ ಸರ್ಜಾ ಪತ್ನಿ ನಟಿ ಮೇಘನಾ ರಾಜ್ ಪರಿವಾರಕ್ಕೆ ಕೊರೋನಾ ವಕ್ಕರಿಸಿದೆ. ಹಿರಿಯ ನಟಿ ಪ್ರಮೀಳಾ ಜೋಷಾಯ್‌ ಅವರಿಗೆ ಕೊರೊನಾ ಪಾಸಿಟಿವ್ ದೃಡಪಟ್ಟು ಆಸ್ಪತ್ರೆ ಸೇರಿದ ಬೆನ್ನಲ್ಲೇ ಮೇಘನಾ ರಾಜ್‌ ಮತ್ತು ಅವರ ಪುತ್ರನಿಗೆ ಹಾಗೂ ಮೇಘನಾ ತಂದೆ ಸುಂದರ್ ರಾಜ್ ಅವರಿಗೂ ಸೋಂಕು ತಗುಲಿರುವುದು ಖಚಿತವಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಸುಂದರ್ ರಾಜ್ ‘ನಮ್ಮ ಕುಟುಂಬದ ಎಲ್ಲರ ಮೇಲೂ ಕೊರೊನಾ ಪರಿಣಾಮ ಬೀರಿದೆ ಎಂದಿದ್ದಾರೆ. ಎರಡು ದಿನಗಳ ಹಿಂದೆಯೇ ಪ್ರಮೀಳಾ ಜೋಷಾಯ್‌ ಬೆಂಗಳೂರಿನ ಖಾಸಗಿ ಆಸ್ಪತ್ರಗೆ ದಾಖಲಾಗಿದ್ದರು. ಮೇಘನಾ ಮತ್ತು ಮಗುವಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಮೇಘನಾ ಮತ್ತು ಮಗುವಿಗೆ ಮನೆಯಲ್ಲೇ ಐಸೊಲೇಟ್ ಆಗಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಯಾವುದೇ ರೋಗ ಲಕ್ಷಣ ಕಾಣಿಸಿಕೊಂಡಿಲ್ಲ. ನಾನು ಮತ್ತು ಪ್ರಮೀಳಾ ಆಸ್ಪತ್ರೆಗೆ ದಾಖಲಾಗಿದ್ದೇವೆ ಎಂದು ಮೇಘನಾ ತಂದೆ ಸುಂದರ್ ರಾಜ್ ತಿಳಿಸಿದ್ದಾರೆ.

ಈ ಹಿಂದೆ ಮೇಘನಾ ರಾಜ್ ಮೈದುನ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾ ಅವರಿಗೆ ಕೊರೊನಾ ತಗುಲಿತ್ತು. ನಂತರ ಸೋಂಕಿನಿಂದ ಚೇತರಿಸಿಕೊಂಡಿದ್ದರು. ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡಿದ್ದ ಮೇಘನಾ ರಾಜ್, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇತ್ತೀಚಿಗಷ್ಟೆ ಮೇಘನಾ ಮಗುವಿನ ತೊಟ್ಟಿಲು ಶಾಸ್ತ್ರ ನಡೆದಿತ್ತು.

Comments are closed.