ಕರಾವಳಿ

ನಾಳೆ ಮಂಗಳೂರಿನ ಗೃಹರಕ್ಷಕ ದಳ ಕಚೇರಿಯಲ್ಲಿ ರಕ್ತದಾನ ಶಿಬಿರ

Pinterest LinkedIn Tumblr

ಮಂಗಳೂರು ಡಿಸೆಂಬರ್ 10 : ಮಂಗಳೂರಿನ ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ನಾಳೆ (ಡಿ.11 ರಂದು)ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರವನ್ನು ಯಶಸ್ವಿಗೊಳಿಸಲು ಕೋರಲಾಗಿದೆ.

ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆ ಹಾಗೂ ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್, ಮಂಗಳೂರು ಹಾಗೂ ಲಯನ್ಸ್ ಡಿಸ್ಟ್ರಿಕ್ಟ್ 317ಆ ಇದರ ಸಂಯುಕ್ತ ಆಶ್ರಯದಲ್ಲಿ ರಕ್ತನಿಧಿ ವೆನ್‍ಲಾಕ್ ಆಸ್ಪತ್ರೆ ಇದರ ಸಹಯೋಗದೊಂದಿಗೆ ಜಿಲ್ಲಾ ಗೃಹರಕ್ಷಕ ದಳ, ದಕ್ಷಿಣ ಕನ್ನಡ ಜಿಲ್ಲೆ, ಮೇರಿಹಿಲ್ ಮಂಗಳೂರು ಕಛೇರಿಯಲ್ಲಿ ಡಿಸೆಂಬರ್ 11 ರಂದು ಬೆಳಿಗ್ಗೆ 9 ಗಂಟೆಯಿಂದ ರಕ್ತದಾನ ಶಿಬಿರ ನಡೆಯಲಿದೆ.

ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಬೇಕೆಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ತಿಳಿಸಿದ್ದಾರೆ.

Comments are closed.