ಕರಾವಳಿ

ಡಿ.14 ರಿಂದ 19ರವರೆಗೆ ಸಕಾಲ ಸಪ್ತಾಹ: ಸರ್ಕಾರಿ ಸೇವೆಗಳಿಗೆ ಅರ್ಜಿ ಸಲ್ಲಿಸಲು ಇದು ಸಕಾಲ

Pinterest LinkedIn Tumblr

ಮಂಗಳೂರು ಡಿಸೆಂಬರ್ 12 : ನಿಗದಿತ ಕಾಲಮಿತಿಯಲ್ಲಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸಕಾಲ ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದ್ದು, ಯೋಜನೆಯನ್ನು ಪರಿಣಾಮಕಾರಿ ಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯು ಡಿಸೆಂಬರ್ 14 ರಿಂದ 19 ರವರೆಗೆ ಸಕಾಲ ಸಪ್ತಾಹವನ್ನು ಆಚರಿಸುತ್ತಿದೆ.

ಕಾರ್ಮಿಕ ಇಲಾಖೆ ಹಾಗೂ ಈ ಕಛೇರಿಯ ಅಧೀನ ಕಚೇರಿಗಳಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮೂಲಕ ಫಲಾನುಭವಿಗಳ ನೋಂದಣಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ದೊರೆಯುವ ಸೌಲಭ್ಯಗಳಾದ ಶೈಕ್ಷಣಿಕ ಧನಸಹಾಯ, ಮದುವೆ ಧನಸಹಾಯ, ಒಳರೋಗಿ ವೈದ್ಯಕೀಯ, ಪ್ರಮುಖ ವೈದ್ಯಕೀಯ, ಹೆರಿಗೆ ಧನಸಹಾಯ ಅರ್ಜಿಗಳ ವಿಲೇವಾರಿ, ಕಟ್ಟಡ ಮತ್ತು ಇತರೆ ನಿರ್ಮಾಣ ಸಂಸ್ಥೆಗಳ ನೋಂದಣಿ, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ನೋಂದಣಿ ಮತ್ತು ನವೀಕರಣ ಸೇವೆಗಳು ಸಕಾಲ ಯೋಜನೆಯಡಿ ವಿಲೇವಾರಿ ಮಾಡಲಾಗುತ್ತದೆ.

ಸಾರ್ವಜನಿಕರು ಈ ಸೇವೆಗಳಿಗೆ ಅರ್ಜಿಯನ್ನು ಸಲ್ಲಿಸಿ ಸಕಾಲ ಸಪ್ತಾಹದ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿ ಕಛೇರಿ, ಉಪವಿಭಾಗ, ಮಂಗಳೂರು, 2ನೇ ಮಹಡಿ, ಪ್ರಕೃತಿ ಕಮರ್ಶಿಯಲ್ ಕಾಂಪ್ಲೆಕ್ಸ್, ಬಂಟ್ಸ್ ಹಾಸ್ಟೇಲ್ ಬಳಿ, ಕದ್ರಿರಸ್ತೆ, ಮಂಗಳೂರು. ದೂ. ಸಂ: 0824-2433132, 2435343 ನ್ನು ಸಂಪರ್ಕಿಸುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.