ಕರ್ನಾಟಕ

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ನಿರಾಕರಿಸಿದ ಕೋರ್ಟ್

Pinterest LinkedIn Tumblr

ಧಾರವಾಡ: ವಿನಯ್​ ಕುಲಕರ್ಣಿಗೆ ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ. ಧಾರವಾಡದ ಸಿಬಿಐ ನ್ಯಾಯಾಲಯದಿಂದ ಜಾಮೀನು ನಿರಾಕರಿಸಿ ತೀರ್ಪು ನೀಡಲಾಗಿದೆ. ಸದ್ಯ ಮಾಜಿ ಸಚಿವ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ

ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟು, ಹಿಂಡಗಾಲ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಧಾರವಾಡದ ಸಿಬಿಐ ವಿಶೇಷ ಕೋರ್ಟ್ ವಜಾಗೊಳಿಸಿದೆ.

ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ನಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವಾಗಿತ್ತು. ಈ ಬಳಿಕ ನ್ಯಾಯಂಗ ಬಂಧವಾಗಿ, ಹಿಂಡಗಾಲ ಜೈಲು ಸೇರಿದ್ದರು.

ಇದೀಗ ವಿನಯ್ ಕುಲಕರ್ಣಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿದಂತ ಧಾರವಾಡದ ಸಿಬಿಐ ವಿಶೇಷ ಕೋರ್ಟ್, ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

Comments are closed.