ಕರಾವಳಿ

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ : ಮೂವರ ಬಂಧನ- ಇಬ್ಬರು ಮಹಿಳೆಯರ ರಕ್ಷಣೆ

Pinterest LinkedIn Tumblr

ಮಂಗಳೂರು/ ಬೆಳ್ತಂಗಡಿ, ಡಿಸೆಂಬರ್.15 : ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಮೂವರು ಆರೋಪಿಗಳನ್ನು ಪೊಲೀಸರನ್ನು ಬಂಧಿಸಿರುವ ಘಟನೆ ಸೋಮವಾರ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿಯ ಮೇಲಂತಬೆಟ್ಟು ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ಇಬ್ಬರು ಮಹಿಳೆಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಜನಾರ್ದನ ಇಳಂತಿಲ (40),ರಾಮಚಂದ್ರ ದೇವಾಡಿಗ (45) ಹಾಗೂ ಜನಾರ್ದನ ಪೂಜಾರಿ(45) ಎಂಬವರನ್ನು ಪೊಲೀಸರು ವಶಕ್ಕೆ ಪಡಿದಿದ್ದಾರೆ. ಇವರ ಜೊತೆ ಇಬ್ಬರು ನೊಂದ ಮಹಿಳೆಯರನ್ನು ರಕ್ಷಿಸಲಾಗಿದೆ.

ಮೇಲಂತಬೆಟ್ಟು ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿರುವ ರಾಮಚಂದ್ರ ದೇವಾಡಿಗ ಎಂಬವರು ಬಾಡಿಗೆಗೆ ಪಡೆದಿದ್ದ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಬಂಟ್ವಾಳ ಡಿವೈಎಸ್‌ಪಿ ವೆಲೆಂಟೈನ್ ಡಿಸೋಜಾ ಅವರ ನೇತೃತ್ವದ ಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Comments are closed.