ಕರಾವಳಿ

ರಾಜ್ಯದ ಹಲವೆಡೆಗಳಲ್ಲಿ ಮೂರು ದಿನಗಳ ಕಾಲ ಭಾರಿ ಮಳೆ ಸಂಭವ

Pinterest LinkedIn Tumblr

ಬೆಂಗಳೂರು, ಡಿಸೆಂಬರ್.16: ರಾಜ್ಯದ ಹಲವೆಡೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ.

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ, ಉಳಿದೆಲ್ಲೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ. ಡಿಸೆಂಬರ್ 17 ರಂದು ಕೂಡ ಒಣಹವೆ ಇರಲಿದ್ದು, ಡಿಸೆಂಬರ್ 18 ರಿಂದ 20ರವರೆಗೆ ಮಳೆಯಾಗಲಿದೆ.

ದಕ್ಷಿಣ ಒಳನಾಡು ಪ್ರದೇಶದ ಚಾಮರಾಜನಗರ, ಚಿಕ್ಕಮಗಳೂರು, ಮಂಡ್ಯ, ಕೊಡಗು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮೈಸೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಡಿಸೆಂಬರ್ 17 ರಿಂದ 19 ರವರೆಗೆ ಗುಡುಗು-ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಉತ್ತರ ಒಳನಾಡು ಭಾಗದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Comments are closed.