ಕರ್ನಾಟಕ

ಪಾರ್ಟಿಗೆ ತೆರಳಿದ ಸಿಐಡಿ ಡಿವೈಎಸ್ಪಿ ಲಕ್ಷ್ಮೀ ನೇಣಿಗೆ ಶರಣು: ಸ್ನೇಹಿತರ ಮೇಲೆ ಅನುಮಾನ ವ್ಯಕ್ತಪಡಿಸಿದ ತಂದೆ

Pinterest LinkedIn Tumblr

ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳಾ ಡಿವೈಎಸ್ಪಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಸಿಐಡಿ ಡಿವೈಎಸ್ಪಿ ಲಕ್ಷ್ಮೀ (33) ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಅಧಿಕಾರಿಯಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದುಬಂದಿಲ್ಲ.

ಅನ್ನಪೂರ್ಣೇಶ್ವರಿ ನಗರದಲ್ಲಿದ್ದ ತಮ್ಮ ಆಪ್ತ ಸ್ನೇಹಿತನ ಮನೆಗೆ ಲಕ್ಷ್ಮೀ ಅವರು ಊಟಕ್ಕೆ ಹೋಗಿದ್ದರು. ಮನೆಯಲ್ಲಿ ಪಾರ್ಟಿಗೆ ಸಿದ್ಧತೆಗಳೂ ನಡೆದಿತ್ತು. ಪಾರ್ಟಿ ವೇಳೆ ಕೋಣೆಗೆ ತೆರಳಿರುವ ಲಕ್ಷ್ಮೀ ಬಾಗಿಲು ಹಾಕಿಕೊಂಡಿದ್ದು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಲಕ್ಷ್ಮಿ 2014ರ ಕೆಎಸ್, ಪಿಎಸ್ ಬ್ಯಾಚ್​ನ ಅಧಿಕಾರಿಯಾಗಿದ್ದವರು. 2017ರಲ್ಲಿ ಕರ್ತವ್ಯಕ್ಕೆ ನಿಯೋಜನೆಯಾಗಿದ್ದರು.

ಕಳೆದ ಕೆಲ ವರ್ಷಗಳ ಹಿಂದೆ ನವೀನ್ ಎನ್ನುವರನ್ನು ಪ್ರೀತಿಸಿ ವಿವಾಹವಾಗಿದ್ದ ಇವರಿಗೆ ಮಕ್ಕಳಾಗಿರಲಿಲ್ಲ. ಇದರಿಂದ ಲಕ್ಷ್ಮೀ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆಂದು ಹೇಳಲಾಗುತ್ತಿದೆ.

ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Updated:

ಮಗಳು ಲಕ್ಷ್ಮೀ ಸಾವಿನ ಬಗ್ಗೆ ಸಂಶಯವಿದ್ದು, ಆಕೆಯ ಸ್ನೇಹಿತರಾದ ಮನು ಹಾಗೂ ಪ್ರಜ್ವಲ್ ಮೇಲೆ ಅನುಮಾನವಿದೆ ಎಂದು ಸಿಐಡಿ ಡಿವೈಎಸ್ಪಿ ಲಕ್ಷ್ಮೀ ಅವರ ತಂದೆ ವೆಂಕಟೇಶ್ ಆರೋಪಿಸಿದ್ದಾರೆ.

ಸ್ನೇಹಿತನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಲಕ್ಷ್ಮೀ ಅವರ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ವೆಂಕಟೇಶ್, ಕಿಟಕಿಯ ‌ಕಂಬಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಈ ಸಾವಿನ ಬಗ್ಗೆ ಅನುಮಾನವಿದ್ದು, ಸ್ನೇಹಿತರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ. ಮಗಳ ಸಾಂಸಾರಿಕ ಜೀವನದಲ್ಲಿ ಯಾವುದೇ ತೊಂದರೆ ಇರಲಿಲ್ಲ. ಚೆನ್ನಾಗಿತ್ತು. ಕಳೆದ ಎರಡು ದಿನಗಳ ಹಿಂದೆ ಅಳಿಯ ಹೈದ್ರಾಬಾದ್ ಗೆ ತೆರಳಿದ್ದರು. ಹೀಗಾಗಿ ಮಗಳು ಸ್ವಲ್ಪ ಬೇಸರ ಮಾಡಿಕೊಂಡಿದ್ದಳು. ಆದರೆ, ಆಕೆ‌ ಮಾನಸಿಕ ಖಿನ್ನತೆಗೆ ಒಳಗಾಗಿರಲಿಲ್ಲ. ಆ ಮಟ್ಟಕ್ಕೆ ತಲುಪುವ ಯಾವುದೇ ಸಮಸ್ಯೆಯೂ ಇರಲಿಲ್ಲ ಎಂದು ತಿಳಿಸಿದ್ದಾರೆ.

Comments are closed.