ಕುಂದಾಪುರ: ನಗರದ ಹೃದಯಭಾಗದಲ್ಲಿರುವ ಲಾಡ್ಜ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಗೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೊಳಗಾದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನೆರೆ ಜಿಲ್ಲೆಯ ಅಪ್ರಾಪ್ತ ಬಾಲಕಿಯನ್ನು ಕರೆತಂದು ಮೂರು ದಿನಗಳಿಂದ ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಪ್ರಕರಣದಲ್ಲಿ ಉಪ್ಪಿನಕುದ್ರುವಿನ ಸಂತೋಷ್ ದೇವಾಡಿಗ (32) ಎಂಬಾತನನ್ನು ಬಂಧಿಸಿ ಪೋಕ್ಸೊ ಪ್ರಕರಣ ದಾಖಲಿಸಲಾಗಿತ್ತು.
ಕುಂದಾಪುರ ಪ್ರಭಾರ ಡಿವೈಎಸ್ಪಿ ಭರತ್ ರೆಡ್ಡಿ, ಸಿಪಿಐ ಗೋಪಿಕೃಷ್ಣ, ಪಿಎಸ್ಐ ಸದಾಶಿವ ಗವರೋಜಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿತ್ತು. ಲಾಡ್ಜ್ ಒಂದರಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಪೊಲೀಸರ ತಂಡ ಲಾಡ್ಜಿನಲ್ಲಿ ಆರೋಪಿಯನ್ನು ಬಂಧಿಸಿದ್ದರು. ಇದೊಂದು ವೇಶ್ಯಾವಾಟಿಕೆ ಜಾಲ ಎನ್ನುವ ಬಗ್ಗೆ ಪ್ರಾಥಮಿಕ ವಿಚಾರಣೆ ವೇಳೆ ತಿಳಿದಿದ್ದರಿಂದ ಆರೋಪಿ ಸಂತೋಷನನ್ನು 2 ದಿನ ಪೊಲೀಸ್ ಕಸ್ಟಡಿಗೆ ಪಡೆದು ತನಿಖೆ ನಡೆಸಲಾಗಿತ್ತು. ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಗುರುವಾರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು 14 ದಿನದ ನ್ಯಾಯಾಂಗ ಬಂಧನ ನೀಡಿ ನ್ಯಾಯಾಲಯ ಆದೇಶಿಸಿದೆ.
Comments are closed.