ಕರಾವಳಿ

ಕರ್ತವ್ಯನಿರತ ಹೆಡ್‌ಕಾನ್‌ಸ್ಟೆಬಲ್‌ ಮೇಲಿನ ಹಲ್ಲೆಗೆ ವಿಎಚ್‌ಪಿ ಖಂಡನೆ: ಗಲಭೆ ಸಂಚು – ಆರೋಪ

Pinterest LinkedIn Tumblr

ಮಂಗಳೂರು : ಕರ್ತವ್ಯನಿರತ ಹೆಡ್‌ಕಾನ್‌ಸ್ಟೆಬಲ್‌ ಗಣೇಶ್ ಕಾಮತ್ ರವರಿಗೆ ಹಾಡು ಹಗಲೇ ಹರಿತವಾದ ಅಯುಧದಿಂದ ಹಲ್ಲೆ ನಡೆಸಿ ಕೊಲೆ ನಡೆಸಲು ಪ್ರಯತ್ನಿಸಿರುವ ಘಟನೆಯನ್ನು ವಿಶ್ವ ಹಿಂದು ಪರಿಷದ್ ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ತಿಳಿಸಿದ್ದಾರೆ.

ನಗರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಇದೆ ಸಮಯದಲ್ಲಿ NRC ಪ್ರತಿಭಟನೆ ಹೆಸರಿನಲ್ಲಿ ಪ್ರತಿಭಟನೆ ನಡೆಸುವಾಗ ಪೋಲೀಸರ ಮೇಲೆ ಕಲ್ಲು ಎಸೆತ, ಹಲ್ಲೆ ಪೊಲೀಸ್ ಸ್ಟೇಷನ್ ಗೆ ಬೆಂಕಿ ಹಚ್ಚಲು ಪ್ರಯತ್ನ ಪಟ್ಟಿದ್ದರು. ಇದೀಗ ಅದೇ ಕಾರ್ಯವನ್ನು ಪುನರಾವರ್ತಿಸಲು ಗಲಭೆ ಸಂಚು ರೂಪಿಸಲು ಪ್ರಯತ್ನಿಸಿದ್ದಾರೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಡಿಸೆಂಬರ್ 23 ಬುಧವಾರದಂದು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಶರಣ್ ಪಂಪವೆಲ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ಗೋಪಾಲ್ ಕುತ್ತಾರ್ ಉಪಸ್ಥಿತರಿದ್ದರು.

Comments are closed.