ಕರಾವಳಿ

ಮೂಡುಬಿದಿರೆ ಸಮೀಪ ಬೋರ್‌ವೆಲ್ ಲಾರಿಗೆ ಬೈಕ್ ಢಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Pinterest LinkedIn Tumblr

ಮೂಡುಬಿದಿರೆ, ಡಿಸೆಂಬರ್.20: ಬೋರ್ ವೆಲ್ ಲಾರಿ ಹಾಗೂ ಬೈಕ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆ ಸಮೀಪದ ತೆಂಕಮಿಜಾರು ಬಳಿಯ ಕೊಂಪದವು ತಿರುವಿನಲ್ಲಿ ರವಿವಾರ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಮುಚ್ಚೂರು ಕಾನ ನಿವಾಸಿ ಚಂದ್ರಶೇಖರ್ ಗೌಡ (32) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿದ್ದ ಚಂದ್ರಶೇಖರ್ ಅವರು ತಮ್ಮ ಬೈಕಿನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬೋರ್ ವೆಲ್ ಲಾರಿಗೆ ಇವರ ಬೈಕ್ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಈ ವೇಳೆ ಬೈಕ್‍ನಿಂದ ರಸ್ತೆಗೆ ಎಸೆಯಲ್ಪಟ್ಟ ಚಂದ್ರಶೇಖರ್ ತಲೆ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದ್ದು, ಅವರು ಸ್ಥಳದಲ್ಲೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಚಂಪಾ ಷಷ್ಠಿಯ ಪ್ರಯುಕ್ತ ಕುಡುಪು ದೇವಸ್ಥಾನಕ್ಕೆ ಭೇಟಿ ನೀಡಿ ಚಂದ್ರಶೇಖರ್ ಅವರು ಮನೆಗೆ ಮರಳುತ್ತಿದ್ದರು. ಈ ವೇಳೆ ತೆಂಕಮಿಜಾರು ಬಳಿ ಕೊಂಪದವು ತಿರುವಿನಲ್ಲಿ ಬೋರ್ ವೆಲ್ ಲಾರಿ – ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಚಂದ್ರಶೇಖರ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Comments are closed.