ಕರಾವಳಿ

ಆಸ್ಪತ್ರೆ, ಕ್ಲಿನಿಕ್, ಮೆಡಿಕಲ್‍ಗಳು ಜ್ವರ, ಶೀತ, ನೆಗಡಿಗೆ ಔಷಧಿ ಪಡೆಯುವವರ ಮಾಹಿತಿಯನ್ನು ಕಡ್ಡಾಯವಾಗಿ ನೀಡುವಂತೆ ಡಿಸಿ ಆದೇಶ

Pinterest LinkedIn Tumblr

ಮಂಗಳೂರು, ಡಿಸೆಂಬರ್ 24: ಖಾಸಗಿ, ಸರ್ಕಾರಿ ಆಸ್ಪತ್ರೆ, ಕ್ಲಿನಿಕ್ ಹಾಗೂ ಮೆಡಿಕಲ್ ಅಂಗಡಿಗಳಲ್ಲಿ ಜ್ವರ, ಶೀತ, ನೆಗಡಿ ರೋಗಗಳಿಗೆ ಔಷಧಿ ಪಡೆಯುವವರ ಮಾಹಿತಿಯನ್ನು ಕಡ್ಡಾಯವಾಗಿ ಜಿಲ್ಲಾಡಳಿತಕ್ಕೆ ನೀಡಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು.

ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್-19 ಲಸಿಕೆಯ ಪೂರ್ವ ತಯಾರಿ ಮತ್ತು 2021 ರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಾಗೂ ರೂಪಾಂತರಿತ ಹೊಸ ಕೊರೋನಾ ರೋಗಗದ ಕುರಿತು ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿದೇಶಗಳಲ್ಲಿ ಕೋವಿಡ್ ಎರಡನೇ ಅಲೆ ಹಾಗೂ ರೂಪಾಂತರಿತ ಹೊಸ ಕೊರೋನ ಸೋಂಕು ಕಂಡು ಬಂದಿದ್ದು ಇಲ್ಲಿಗೂ ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಹಾಗೂ ಔಷದಿ ಅಂಗಡಿಗಳಲ್ಲಿ ಜ್ವರ, ಶೀತ, ನೆಗಡಿ, ಕೆಮ್ಮು ಸಂಬಂಧಿತ ರೋಗಕ್ಕೆ ಔಷಧಿ ಪಡೆಯುವವರ ಸಂಪೂರ್ಣ ಮಾಹಿತಿಯನ್ನು ಕಡ್ಡಾಯವಾಗಿ ಪಡೆಯಬೇಕು. ಇವುಗಳನ್ನು ಕಡ್ಡಾಯವಾಗಿ ಸಂಬಂಧಿಸಿದ ಸಾಫ್ಟ್‍ವೇರ್‍ನಲ್ಲಿ ನಮೂದಿಸಲು ಸೂಚಿಸಿದರು.

ತಾಲೂಕು ವೈದ್ಯಾಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ನಗರ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚು ಹೆಚ್ಚು ಮಾಡಬೇಕು. ಖಚಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಟೈನ್‍ಮೆಂಟ್ ಪ್ರದೇಶಗಳನ್ನು ಗುರುತಿಸುವುದರ ಜೊತೆಗೆ ಅವರ ಕುಟುಂಬ ವರ್ಗದವರನ್ನು ಹೋಮ್ ಕ್ವಾರಂಟೈನ್‍ನಲ್ಲಿ ಇರಿಸಿ ನಿಗಾವಹಿಸಬೇಕು ಎಂದರು.

ತಾಲೂಕು ವೈದ್ಯಾಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ನಗರ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚು ಹೆಚ್ಚು ಮಾಡಬೇಕು. ಖಚಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಟೈನ್‍ಮೆಂಟ್ ಪ್ರದೇಶಗಳನ್ನು ಗುರುತಿಸುವುದರ ಜೊತೆಗೆ ಅವರ ಕುಟುಂಬ ವರ್ಗದವರನ್ನು ಹೋಮ್ ಕ್ವಾರಂಟೈನ್‍ನಲ್ಲಿ ಇರಿಸಿ ನಿಗಾವಹಿಸಬೇಕು ಎಂದರು.

ಕೋವಿಡ್-19 ಲಸಿಕೆಯು ಲಭ್ಯತೆ ಅನುಗುಣವಾಗಿ ಹಾಗೂ ಆದ್ಯತೆಯ ಅನುಸಾರ ಮೂರು ಹಂತದಲ್ಲಿ ಲಸಿಕೆ ನೀಡಲಾಗುತ್ತದೆ. ಲಸಿಕೆಯು ನೊಂದಣಿ ಮಾಡಿಕೊಂಡವರಿಗೆ ಪಡೆಯಲು ಅವಕಾಶ ಇರುತ್ತದೆ. ಲಸಿಕೆ ಹಂಚಿಕೆ ಸಂಬಂಧಿಸಿದಂತೆ ತಹಶೀಲ್ದಾರ್ ಹಾಗೂ ತಾಲೂಕು ವೈದ್ಯಾಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಜೊತೆಗೆ ಸಿಬ್ಬಂದಿಗಳನ್ನು ವಿಶೇಷ ತರಬೇತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಹೆಳಿದರು.

ಜನರು ಹೆಚ್ಚು ಆತಂಕಕ್ಕೊಳಗಾಗದೆ ಹಾಗೂ ಭಯ ಪಡದೆ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಕೊವಿಡ್ ಪರೀಕ್ಷೆ ಮಾಡಬೇಕು. ವಿದೇಶಿ ಪ್ರಯಾಣಿಕರು ಕಡ್ಡಾಯವಾಗಿ ಹೋ ಕ್ವಾರಂಟೈನ್‍ಗೆ ಒಳಗಾಗಿ ಆರ್‍ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು. ಈಗಾಗಲೇ ಜಿಲ್ಲೆಗೆ ಆಗಮಿಸಿದ 49 ವಿದೇಶಿ ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದೆ, ಇದರಲ್ಲಿ 35 ಮಂದಿಯ ವರದಿ ನೆಗೆಟಿವ್ ಬಂದಿದೆ, ಬಾಕಿ ಉಳಿದಿರುವವರ ಪರೀಕ್ಷೆ ಪ್ರಕ್ರಿಯೆಯಲ್ಲಿರುತ್ತದೆ ಎಂದು ಜಿಲ್ಲಾ ಆರೋಗ್ಯಾದಿಕಾರಿ ರಾಮಚಂದ್ರ ಬಾಯರಿ ಹೆಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪ, ಐಎಎಸ್ ಪ್ರೋಬೇಷನರಿ ಆಫಿಸರ್ ಮೋನಾ ರೋತ್, ಆರ್.ಸಿಹೆಚ್ ಅಧಿಕಾರಿ ಡಾ. ರಾಜೇಶ್, ಮಹಾನಗರ ಪಾಲಿಕೆಯ ವೈದ್ಯಾಧಿಕಾರಿ ಡಾ.ಮಂಜಯ್ಯ ಶೆಟ್ಟಿ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Comments are closed.