ಕರಾವಳಿ

ಗಡಿಭಾಗಗಳಲ್ಲಿ 15 ದಿನಕ್ಕೊಮ್ಮೆ ಆರ್.ಪಿ.ಸಿ.ಆರ್ ಪರೀಕ್ಷೆ ಕಡ್ಡಾಯ: ಖಾಸಗಿ ಆಸ್ಪತ್ರೆಗಳಲ್ಲಿ ದರ ನಿಗದಿ

Pinterest LinkedIn Tumblr

ಮಂಗಳೂರು : ಉದ್ಯೋಗ ನಿಮಿತ್ತ ಕಾಸರಗೋಡು ಸೇರಿದಂತೆ ಇನ್ನಿತರ ಗಡಿಭಾಗದಿಂದ ನಗರಕ್ಕೆ ಆಗಮಿಸುವವರು ಕಡ್ಡಾಯವಾಗಿ 15 ದಿನಕ್ಕೊಮ್ಮೆ ಆರ್‍ಟಿಪಿಆರ್ ಪರೀಕ್ಷೆಗೆ ಒಳಗಾಗಬೇಕು, ಅವರ ಟೆಸ್ಟ್ ವರದಿಯನ್ನು ಉದ್ಯೋಗ ಸಂಸ್ಥೆ ಪಡೆದು ಜಿಲ್ಲಾ ಆರೋಗ್ಯ ಇಲಾಖೆಗೆ ನೀಡಬೇಕು. ಜೊತೆಗೆ ನಗರದಿಂದ ಕಾಸರಗೋಡಿಗೆ ತೆರಳುವವರು ಕೂಡ ಪರೀಕ್ಷೆಗೆ ಒಳಗಾಗಬೇಕು ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದ್ದಾರೆ.

ಈಗಾಗಲೇ ಸರ್ಕಾರವು ಖಾಸಗಿ ಆಸ್ಪತ್ರೆಗಳಲ್ಲಿ ಆರ್.ಪಿ.ಸಿ.ಆರ್ ಪರೀಕ್ಷೆಗೆ 800 ರೂಪಾಯಿ ದರ ನಿಗದಿಪಡಿಸಿದ್ದು, ಹೆಚ್ಚುವರಿ ದರ ಪಡೆದುಕೊಂಡ ಬಗ್ಗೆ ದೂರು ಬಂದರೆ ಅಂತಹ ಆಸ್ಪತ್ರೆಗಳಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ತಾಲೂಕು ವೈದ್ಯಾಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ನಗರ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚು ಹೆಚ್ಚು ಮಾಡಬೇಕು. ಖಚಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಟೈನ್‍ಮೆಂಟ್ ಪ್ರದೇಶಗಳನ್ನು ಗುರುತಿಸುವುದರ ಜೊತೆಗೆ ಅವರ ಕುಟುಂಬ ವರ್ಗದವರನ್ನು ಹೋಮ್ ಕ್ವಾರಂಟೈನ್‍ನಲ್ಲಿ ಇರಿಸಿ ನಿಗಾವಹಿಸಬೇಕು ಎಂದರು.

ತಾಲೂಕು ಮಟ್ಟದಲ್ಲಿ ತಹಶೀಲ್ದಾರ್, ತಾಲೂಕು ಪಂಚಾಯತ್ ಇ.ಓ ಅಧಿಕಾರಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಭೆ ನಡೆಸಲು ಸೂಚಿಸಿದ ಜಿಲ್ಲಾಧಿಕಾರಿಗಳು ಜನ ಸಾಮಾನ್ಯರೊಂದಿಗೆ ಕೋವಿಡ್ ಸೋಂಕು ತಡೆಯುವ ಬಗ್ಗೆ ಅರಿವು ಮೂಡಿಸುವುದರೊಂದಿಗೆ, ಮುನ್ನೆಚ್ಚರಿಕಾ ಕ್ರಮಗಳು ಪರಿಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದರು.

Comments are closed.