ಉಡುಪಿ: ರಸ್ತೆ ಪಕ್ಕದಲ್ಲಿ ಬಸ್ಸಿಗಾಗಿ ಕಾಯುತಿದ್ದ ಇಬ್ಬರಿಗೆ ಕಾರು ಢಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ಅವರು ಮೃತಪಟ್ಟ ಘಟನೆ ಪಡುಬಿದ್ರೆ ಸಮೀಪದ ಎರ್ಮಾಳಿನಲ್ಲಿ ನಡೆದಿದೆ. ಎರ್ಮಾಳ್ ನಿವಾಸಿ ಸಂಜೀವ ದೇವಾಡಿಗ (45) ಮತ್ತು ಉತ್ತರ ಪ್ರದೇಶ ಮೂಲದ ಅರವಿಂದ್ (22) ಮೃತ ದುರ್ದೈವಿಗಳು.
ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಮಾರುತಿ ಆಲ್ಟೋ ಕಾರು ರಾಷ್ಟ್ರೀಯ ಹೆದ್ದಾರಿ 66ರ ತೆಂಕ ಎರ್ಮಾಳ್ ಸರಕಾರಿ ಶಾಲೆ ಮುಂಭಾಗದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಇಬ್ಬರಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಮೃತಪಟ್ಟರು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಾಗಿದೆ.