ಕರಾವಳಿ

ಪ್ರಧಾನಿ ಮೋದಿಯವರಿಂದ ರೈತರ ಖಾತೆಗಳಿಗೆ 18,000 ಕೋಟಿ ರೂ.ವರ್ಗಾವಣೆ : ಮಂಗಳೂರಿನಲ್ಲಿ ನೇರ ಪ್ರಸಾರ

Pinterest LinkedIn Tumblr

ಮಂಗಳೂರು, ಡಿಸೆಂಬರ್. 26: ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಮತ್ತೊಂದು ಕಂತನ್ನು ಬಟನ್ ಒತ್ತಿ ದೇಶದ 9 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ 18,000 ಕೋಟಿ ರೂಪಾಯಿ ವರ್ಗಾವಣೆ ಮಾಡಿದರು.

ಈ ಕಾರ್ಯಕ್ರಮದ ನೇರ ಪ್ರಸಾರದ ವ್ಯವಸ್ಥೆಯನ್ನು ಮಂಗಳೂರಿನ ನವಭಾರತ್ ಸರ್ಕಲ್ ಸಮೀಪದ ಟಿ.ವಿ ರಾಮಣ ಪೈ ಸಭಾಂಗಣದಲ್ಲಿ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದರಾದ *ಶ್ರೀ ನಳಿನ್ ಕುಮಾರ್ ಕಟೀಲ್*, ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುದರ್ಶನ್ ಮೂಡಬಿದ್ರೆ, ಮಂಗಳೂರು ವಿಭಾಗ ಪ್ರಭಾರಿ ಶ್ರೀ ಉದಯ್ ಕುಮಾರ್ ಶೆಟ್ಟಿ, ಶಾಸಕರುಗಳಾದ ಶ್ರೀ ವೇದವ್ಯಾಸ ಕಾಮತ್, ಶ್ರೀ ಉಮಾನಾಥ ಕೋಟ್ಯಾನ್, ಶ್ರೀ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಮೂಡ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ನಿತಿನ್ ಕುಮಾರ್, ದಿ ಮೈಸೂರ್ ಎಲೆಕ್ಟ್ರಿಕಲ್ ಲಿಮಿಟೆಡ್ ನ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಬೋಳಿಯಾರ್, ಎ.ಪಿ.ಎಂ.ಸಿ ಅಧ್ಯಕ್ಷರಾದ ಶ್ರೀ ಕೃಷ್ಣರಾಜ ಹೆಗ್ಡೆ, ರೈತ ಮುಖಂಡರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Comments are closed.