ಕುಂದಾಪುರ: ಮನೆ-ಮನೆಗಳಿಗೆ ತೆರಳಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನು ಮಾರ್ಕೆಟ್ ಸಮೀಪ ಈ ಘಟನೆ ನಡೆದಿದ್ದು ಇಲ್ಲಿನ ನಿವಾಸಿ ಅಬ್ದುಲ್ ರಹೀಂ (30) ಬಂಧಿತ ಆರೋಪಿ.
ಗಂಗೊಳ್ಳಿ ಪಿಎಸ್ಐ ಭೀಮಾಶಂಕರ್ ಅವರು ಹೆಡ್ ಕಾನ್ಸ್‌ಟೇಬಲ್ ಗಿರೀಶ್ ಅವರೊಂದಿಗೆ ಗಂಗೊಳ್ಳಿ ಪೇಟೆಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಗಂಗೊಳ್ಳಿ ಮೀನು ಮಾರ್ಕೆಟ್ ಸಮೀಪ ಅಬ್ದುಲ್ ರಹೀಂ ಎಂಬಾತ ದನದ ಮಾಂಸವನ್ನು ಮನೆ ಮನೆಗೆ ತೆರಳಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಬಂದಿದ್ದು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಆರೋಪಿ ಪ್ಲಾಸ್ಟಿಕ್ ತೊಟ್ಟೆಯಲ್ಲಿ ಅಕ್ರಮವಾಗಿ 4 ಕೆ.ಜಿ ದನದ ಮಾಂಸವನ್ನು ತೆಗೆದುಕೊಂಡು ಹೋಗುತ್ತಿರುವುದು ಕಂಡುಬಂಂದಿದ್ದು ಆರೋಪಿ ಹಾಗೂ ಮಾಂಸವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.