ಕರಾವಳಿ

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕಠಿಣ ನಿಯಮ ಜಾರಿ : ಮದ್ಯ ಪ್ರಿಯರಿಗೆ ಅಘಾತ

Pinterest LinkedIn Tumblr

ಬೆಂಗಳೂರು, ಡಿಸೆಂಬರ್.30: ಹೊಸ ವರ್ಷಾಚರಣೆ ಹೆಸರಿನಲ್ಲಿ ಕುಡಿದು ವಾಹನ ಚಲಾಯಿಸಿದ್ರೆ ಲೈಸೆನ್ಸ್’ ರದ್ದು ಮಾಡುವುದಾಗಿ ಬೆಂಗಳೂರು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಬಿ.ಆರ್.‌ ರವಿಕಾಂತೇಗೌಡ ಹೇಳಿದ್ದಾರೆ.

ನಗರದಲ್ಲಿ ಕೊರೊನಾ ರೂಪಾಂತರಿ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಸಾರ್ವಜನಿಕ ವರ್ಷಾಚರಣೆಗೆ ಬ್ರೇಕ್‌ ಹಾಕಲಾಗಿದ್ದು, ಕಾನೂನು ಸುವ್ಯವಸ್ಥೆ ಮತ್ತು ಸಂಚಾರಿ ಪೊಲೀಸ್ ಸೇರಿ ಕಟ್ಟುನಿಟ್ಟಿನ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ ಎಂದು ರವಿಕಾಂತೇಗೌಡ ಹೇಳಿದ್ದಾರೆ.

ನಾಳೆ ರಾತ್ರಿ 10 ಗಂಟೆಯ ಹೊತ್ತಿಗೆ ಬೆಂಗಳೂರಿನ ಹೊರವಲಯ ಮತ್ತು ಒಳವಲಯದ ಎಲ್ಲ ಪ್ಲೈಓವರ್‌ ಗಳನ್ನ ಮುಚ್ಚಲಾಗುತ್ತೆ. ಅದರಂತೆ ಪ್ಲೈಓವರ್‌ ಗಳ ಕೆಳಗೆ ಮಾತ್ರ ಓಡಾಡಲು ಅವಕಾಶ ನೀಡಲಾಗುತ್ತೆ.

ನಾಳೆ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧವಿರಲಿದ್ದು, ಎಂ.ಜಿ ರಸ್ತೆ, ಬ್ರಿಗೇಡ್‌ ರಸ್ತೆ, ಚರ್ಚ್‌ ಸ್ಟ್ರೀಟ್‌, ಮ್ಯೂಸಿಯಂ ರಸ್ತೆ, ರೆಸಿಡೆನ್ಸಿ ರಸ್ತೆಯಲ್ಲೂ ಸಂಚಾರ ನಿರ್ಬಂಧ ಹೇರಲಾಗಿದೆ. ಅದ್ರಂತೆ, ಡಿಸೆಂಬರ್‌ 31ರ ರಾತ್ರಿ 8 ಗಂಟೆಯಿಂದ್ಲೆ ಸಂಚಾರ ನಿರ್ಬಂಧ ಹೇರಲಾಗಿದೆ ಎಂದು ಅವರು ತಿಳಿಸಿದ್ದಾರೆ..

ಇನ್ನು ಮದ್ಯ ಪ್ರಿಯರಿಗೆ ಎಚ್ಚರಿಕೆ ನೀಡಿದ ಆಯುಕ್ತರು, ಕುಡಿದು ವಾಹನ ಚಾಲಾಯಿಸಿದ್ರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ. ಮದ್ಯ ಸೇವಿಸಿ ವಾಹನ ಚಾಲನೆ ಮಾಡುವವರ ಲೈಸನ್ಸ್‌ ರದ್ದು ಮಾಡುವುದ್ರ ಜೊತೆಗೆ ಭದ್ರತಾ ಕಾಯ್ದೆ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ನಾಳೆ ರಾತ್ರಿ 8 ಗಂಟೆಯಿಂದ್ಲೆ ಸಂಚಾರ ನಿರ್ಬಂಧ ಹೇರಲಾಗಿದ್ದು, ಬೆಂಗಳೂರಿನಾದ್ಯಂತ ಸಂಚಾರ ವಿಭಾಗಕ್ಕೆಂದೆ ಎರಡುವರೆ ಸಾವಿರ ಪೊಲೀಸ್‌ ಸಿಬ್ಬಂದಿಗಳನ್ನ ನಿಯೋಜನೆ ಮಾಡಲಾಗಿದ್ದು, ಬೆಂಗಳೂರು ನಗರದ 44 ಟ್ರಾಪಿಕ್‌ ಠಾಣಾ ವ್ಯಾಪ್ತಿಯಲ್ಲಿ 668 ಸೆಕ್ಟರ್‌ ಗಳಲ್ಲಿ ಟ್ರಾಫಿಕ್ ಪೊಲೀಸರು ಕಾರ್ಯ ನಿರ್ವಹಿಸಲಿದ್ದಾರೆ.

ಜನರ ಅನುಕೂಲಕ್ಕಾಗಿ ಸಂಚಾರ ಮಾರ್ಗ ಬದಲಾಯಿಸಲಾಗಿದೆ. ಮದ್ಯ ಸೇವಿಸಿದ ನಂತರ ವಾಹನ ಚಾಲನೆಗೆ ಅವಕಾಶ ಇರೋದಿಲ್ಲ . ಇನ್ನು ರೆಸ್ಟೋರೆಂಟ್‌ʼಗಳ ಮಾಲೀಕರ ಜೊತೆ ಸಭೆ ನಡೆಸಲಿದ್ದೇವೆ ಎಂದು ರವಿಕಾಂತೇಗೌಡ ತಿಳಿಸಿದ್ದಾರೆ.

Comments are closed.