ಬೆಂಗಳೂರು : ಜನವರಿ 1ರಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿದ್ದು, ಈ ಹಿನ್ನೆಲೆ ರಾಜ್ಯ ಸರ್ಕಾಠ ಈಗಾಗಲೇ ಹಲವು ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿ ಶಾಲೆ ಆರಂಭಿಸಲು ಶಿಕ್ಷಣ ಸಂಸ್ಥೆಗಳಿಗೆ ಗ್ರೀನ್ ಸಿಗ್ನಲ್ ನೀಡಿದೆ.
ಜನವರಿ 1ರಿಂದ ಶಾಲೆ ಪುನಾರಂಭದ ಹಿನ್ನೆಲೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶಿಕ್ಷಣ ಸಂಸ್ಥೆಗಳಿಗೆ, ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮುಖ್ಯ ಸೂಚನೆ ನೀಡಿದ್ದಾರೆ.
1) ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಕೈತೊಳೆಯಲು ಸ್ಯಾನಿಟೈಸರ್ ಇಲ್ವೇ ಸಾಬೂನು ಬಳಸಿ.
2) ಉಪಾಧ್ಯಾಯರು ಕೋವಿಡ್ ಪರೀಕ್ಷೆ ಫಲಿತಾಂಶದೊಂದಿಗೆ ಬರುವುದು, ಫೇಸ್ ಮಾಸ್ಕ ಮತ್ತು ಫೇಸ್ ಶೀಲ್ಡ್ ಧರಿಸುವುದು ಕಡ್ಡಾಯ
3) ಮಕ್ಕಳ ಶಾರೀರಿಕ ಅಂತರವನ್ನು ಉಳಿಸಿಕೊಳ್ಳುವಲ್ಲಿ ಗಮನ ಹರಿಸುವುದು, ಅವರ ಆರೋಗ್ಯ, ರೋಗಲಕ್ಷಣಗಳ ಕುರಿತು ಆಗಾಗ್ಗೆ ಗಮನ ಹರಿಸುವುದು,
4) ತರಗತಿ ಕೊಠಡಿಯಲ್ಲಿ ಚಿಕ್ಕ ಸಂಖ್ಯೆಯ ಮಕ್ಕಳನ್ನು ಸಾಮಾಜಿಕ ಅಂತರದಲ್ಲಿ ಕೂರಿಸುವುದು ಸೇರಿದಂತೆ ಕೋವಿಡ್ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು .
5) ಸಂಜೆ ಶಾಲೆ ಮುಗಿದ ನಂತರ ಶಾಲಾವರಣ, ತರಗತಿ ಕೊಠಡಿ ಮತ್ತು ಶೌಚಾಲಯಗಳನ್ನು ಸ್ಯಾನಿಟೈಸರ್ ಮಾಡುವುದನ್ನು ಕಡ್ಡಾಯ.
ಇನ್ನೂ., ಉಪನ್ಯಾಸಕರು ಇಲಾಖೆ ನಿಗದಿಪಡಿಸುವ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಕ್ರಮ ವಹಿಸಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗದಿತ ಅವಧಿಯೊಳಗೆ ಪಾಠ ಮುಗಿಸುವುದರತ್ತ ಗಮನ ಹರಿಸಬೇಕು ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಕಳೆದ ವರ್ಷದ ಬಸ್ ಪಾಸುಗಳನ್ನೇ ಬಳಸಲು ಅವಕಾಶವಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಯಾಗುವುದಿಲ್ಲ ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಬೇಕೆಂದು ಹೇಳಿದರು.