ಕರ್ನಾಟಕ

ಎದೆ ನೋವು: ಮಾಜಿ ಕ್ರಿಕೆಟಿಗ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲು

Pinterest LinkedIn Tumblr

ಕಲ್ಕತ್ತಾ : ಮಾಜಿ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕಲ್ಕತ್ತಾದ ವುಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 48 ವರ್ಷ ಗಂಗೂಲಿ ಆರೋಗ್ಯ ಸ್ಥಿರವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಯ ತುರ್ತುವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ ಸಂಜೆ ಎಂದಿನಂತೆ ದೈಹಿಕ ಕಸರತ್ತಿನಲ್ಲಿ ತೊಡಗಿದ್ದ ವೇಳೆ ಗಂಗೂಲಿಗೆ ಎದೆನೋವು ಕಾಣಿಸಿಕೊಂಡಿತ್ತು. ಬಳಿಕ ಕುಟುಂಬ ಸದಸ್ಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಅವ್ರಿಗೆ ಹೃದಯಾಘಾತವಾಗಿದೆ ಎಂದು ಮೂಲಗಳು ಹೇಳಿವೆ. ಸದ್ಯ ಗಂಗೂಲಿ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಹೇಳಿವೆ.

ಸದ್ಯ ಗಂಗೂಲಿ ಕ್ಷೇಮವಾಗಿದ್ದಾರೆ. ಹೃದಯಾಘಾತದಿಂದ ಅಥವಾ ಇನ್ನಿತರ ಸಮಸ್ಯೆಯಿಂದ ಅವರಿಗೆ ಎದೆ ನೋವು ಕಾಣಿಸಿಕೊಂಡಿರುವ ಕುರಿತು ವಿವಿಧ ಪರೀಕ್ಷೆಗಳ ಮೂಲಕ ತಿಳಿಯಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಮತ್ತೊಂದು ವರದಿಯ ಪ್ರಕಾರ ಗಂಗೂಲಿ ಹೃದಯಾಘಾತಕ್ಕೆ ಒಳಗಾಗಿದ್ದು, ಶನಿವಾರ ಸಂಜೆ ಆಂಜಿಯೋಪ್ಲಾಸ್ಟಿಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ. ಸೌರವ್ ಗಂಗೂಲಿ ಬೇಗ ಗುಣಮುಖರಾಗಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.

Comments are closed.