ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಉರುಳಿಬಿದ್ದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸಾವನ್ನಪ್ಪಿದ ಘಟನೆ ಬೈಂದೂರು ಸಮೀಪದ ಒತ್ತಿನೆಣೆಯಲ್ಲಿ ನಡೆದಿದೆ. ಲಾರಿ ಚಾಲಕ ರಾಮಪ್ರಸಾದ್ ಪವಾರ್ (35) ಮೃತಪಟ್ಟವರು.
ಮಹಾರಾಷ್ಟ್ರದಿಂದ ಮಂಗಳೂರಿನತ್ತ ಬೇಕರಿ ಸಾಮಾನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕೆಳರಸ್ತೆಗೆ ಉರುಳಿದ್ದು ಕಾರಿಗೆ ಡಿಕ್ಕಿಯಾಗಿತ್ತು. ಲಾರಿಯಲ್ಲಿದ್ದ ಇಬ್ಬರ ಪೈಕಿ ಓರ್ವ ಮೃತಪಟ್ಟಿದ್ದು ಇನ್ನೊಬ್ಬರಿಗೆ ಗಾಯವಾಗಿದೆ. ಕಾರಿನಲ್ಲಿ ಮೂವರಿದ್ದು ಗಾಯಗಳಾಗಿದೆ.
ಸ್ಥಳಕ್ಕೆ ಬೈಂದೂರು ಸಿಪಿಐ ಸಂತೋಷ ಕಾಯ್ಕಿಣಿ, ಪಿಎಸ್ಐ ಸಂಗೀತಾ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.