ಕರಾವಳಿ

ವಿವಿಧ ದೈವಸ್ಥಾನಗಳಲ್ಲಿ ಕಳ್ಳತನ :ಧಾರವಾಡ ಮೂಲದ ವ್ಯಕ್ತಿ ಬಂಧನ-ಸೊತ್ತು ವಶ

Pinterest LinkedIn Tumblr

ಮಂಗಳೂರು, ಜನವರಿ.11 : ಸುರತ್ಕಲ್ ಪರಿಸರದ ವಿವಿಧ ದೈವಸ್ಥಾನಗಳಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧಾರವಾಡ ಮೂಲದ ವ್ಯಕ್ತಿಯೊಬ್ಬನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ಸರಣಿ ಕಳ್ಳತನ ನಡೆಸಿರುವ ಮೂಲತಃ ಧಾರವಾಡ ನಿವಾಸಿ, ಪ್ರಸ್ತುತ ಉಡುಪಿ ಇಂದ್ರಾಳಿ ದುರ್ಗಾನಗರದಲ್ಲಿ ವಾಸಿಸುತ್ತಿರುವ ರಾಜೇಶ್ ನಾಯ್ಕ ಅಲಿಯಾಸ್ ರಾಜೇಶ್ ಪಾಮಡಿ (42) ಬಂಧಿತ ಆರೋಪಿ. ಸುರತ್ಕಲ್ ಪೊಲೀಸ್ ಇನ್ಸ್‌ಪೆಕ್ಟರ್ ಚಂದ್ರಪ್ಪ ಕೆ ಅವರ ಸೂಚನೆಯ ಮೇರೆಗೆ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ಚಂದ್ರಶೇಖರಯ್ಯ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯಿಂದ 47 ಗ್ರಾಂ ಚಿನ್ನ ,16 ಕೆಜಿ ತೂಕದ ಬೆಳ್ಳಿ ವಸ್ತುಗಳನ್ನು ಒಳಗೊಂಡಂತೆ 13.53 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಳಾಯಿ ಗ್ರಾಮದ ರವಿಶೆಟ್ಟಿ, ಈಡ್ಯಾ ಗ್ರಾಮದ ಗುಡ್ಡೆ ಕೊಪ್ಪಳ ರಾಮಂಜನೇಯ ಭಜನಾ ಮಂದಿರ, ಕಾರು ಮನೆ ದೈವಸ್ಥಾನ ಮತ್ತು ಸತೀಶ್ ಸುವರ್ಣ ಅವರ ಕುಟುಂಬಕ್ಕೆ ಸೇರಿದ ದೈವಸ್ಥಾನದಿಂದ ರಾಜೇಶ್ ನಾಯ್ಕ ಕಳ್ಳತನ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. ಇದೀಗ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Comments are closed.