ಕರಾವಳಿ

ಧಾರ್ಮಿಕ ಸ್ಥಳಗಳಲ್ಲಿ ಕಾನೂನುಬಾಹಿರ ಧ್ವನಿವರ್ಧಕ ಬಳಕೆ ವಿರುದ್ಧ ಕ್ರಮಕೈಗೊಳ್ಳಲು ಹೈಕೋರ್ಟ್ ನಿರ್ದೇಶನ: ಈ ಬಗ್ಗೆ ಕೂಡಲೇ ಕ್ರಮ ಜರುಗಿಸಲು ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Pinterest LinkedIn Tumblr

ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠವು ಧಾರ್ಮಿಕ ಸ್ಥಳಗಳಲ್ಲಿ ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಕೆ ಮಾಡುವುದರ ವಿರುದ್ಧ ಕ್ರಮ ಜರುಗಿಸಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಪೋಲಿಸ್ ಇಲಾಖೆಗೆ ನಿರ್ದೇಶನ ನೀಡಿರುವುದು ಅತ್ಯಂತ ಮಹತ್ವದ ನಿರ್ಣಯವಾಗಿದೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ಸ್ವಾಗತಿಸುತ್ತದೆ ಎಂದು ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಶ್ರೀ ಮೋಹನ ಗೌಡ ತಿಳಿಸಿದ್ದಾರೆ.

ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ರಾಜ್ಯದಲ್ಲಿ ಹೆಚ್ಚಿನ ನಗರ, ಹಳ್ಳಿ, ಹೋಬಳಿಗಳಲ್ಲಿಅನ್ಯಮತೀಯರಿಂದ ಅನಧಿಕೃತವಾಗಿ ಕರ್ಣಕರ್ಕಶವಾದ ಧ್ವನಿವರ್ಧಕ ಬಳಸಿ ಅಜಾನ್ ಕೂಗಲಾಗುತ್ತದೆ.

ಇದು ರೋಗಿಗಳು, ವಯಸ್ಕರರು ಹಾಗೂ ವಿದ್ಯಾರ್ಥಿಗಳಿಗೆ ಹಲವಾರು ರೀತಿಯ ಅಡಚಣೆಗಳನ್ನು ತರುತ್ತದೆ. ಬಹುತೇಕ ಕಡೆಗಳಲ್ಲಿ ಇದರ ಬಗ್ಗೆ ಆಡಳಿತಕ್ಕೆ ಮನವಿ ನೀಡಿದರೂ, ಏನೂ ಕ್ರಮ ಜರುಗಿಸಿಲ್ಲ.

ಇಂದು ಉಚ್ಚ ನ್ಯಾಯಾಲಯವೇ ಆದೇಶ ನೀಡಬೇಕಾಯಿತು. ಇನ್ನಾದರೂ ಸರ್ಕಾರವು ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶವನ್ನು ಕೂಡಲೇ ಜಾರಿಗೆ ತರಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸುತ್ತದೆ ಎಂದವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Comments are closed.