ಕರಾವಳಿ

ಪರಿಸರದ ಸ್ವಚ್ಚತೆ ಕಾಪಾಡುವುದು ಪ್ರತಿಯೊಬ್ಬ ಪ್ರಜೆಯ ಹೊಣೆಗಾರಿಕೆ : ಡಾ: ಚೂಂತಾರು

Pinterest LinkedIn Tumblr

ಮಂಗಳೂರು : ಪರಿಸರದ ಸ್ವಚ್ಚತೆ ಕಾಪಾಡುವುದು ಪ್ರತಿಯೊಬ್ಬ ಪ್ರಜೆಯ ಸಾಮಾಜಿಕ ಹೊಣೆಗಾರಿಕೆ ಎಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ| ಮುರಲೀ ಮೋಹನ್ ಚೂಂತಾರು ಹೇಳಿದರು.

ಅವರು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆಯ ವತಿಯಿಂದ ವಾಮಂಜೂರು, ತಿರುವೈಲಿನ ಅಮೃತೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಸ್ವಚ್ಚತಾ ಕಾರ್ಯಕ್ರಮ ಹಾಗೂ ಶ್ರಮದಾನದಲ್ಲಿ ಗೃಹರಕ್ಷಕರನ್ನುದ್ದೇಶಿಸಿ ಮಾತನಾಡಿದರು. ನಿಷ್ಕ್ರಾಮ ಸೇವೆ ಸಲ್ಲಿಸುವ ಗೃಹರಕ್ಷಕರು ಸ್ವಚ್ಚತಾ ಅಂದೋಲನದಲ್ಲಿ ಕೈ ಜೋಡಿಸಿ ಇತರರಿಗೆ ಮಾದರಿಯಾಗಬೇಕು ಎಂದರು.

ಜನವರಿ ಮೂರನೇ ವಾರದಲ್ಲಿ ನಡೆಯುವ ವರ್ಷಾವಧಿ ಜಾತ್ರೆಯ ಹಿನ್ನೆಲೆಯಲ್ಲಿ ಈ ಸ್ವಚ್ಚತಾ ಕಾರ್ಯಕ್ರಮ ಮತ್ತು ಶ್ರಮದಾನ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಮುಖ್ಯ ಅರ್ಚಕ ಬಾಲಕೃಷ್ಣ ಭಟ್, ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಗೃಹರಕ್ಷಕರುಗಳಾದ ಸುನಿಲ್, ರಮೇಶ್ ಭಂಡಾರಿ, ಮಹೇಶ್, ದಿವಾಕರ, ದುಷ್ಯಂತ್, ಶುಭ, ಉಷಾ, ದಿವ್ಯಾ, ಜಯಂತಿ, ಮುಂತಾದವರು ಉಪಸ್ಥಿತರಿದ್ದರು. ಸುಮಾರು 25 ಮಂದಿ ಗೃಹರಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Comments are closed.