ಕರಾವಳಿ

ವಿಹಿಂಪ ಕಾರ್ಯದರ್ಶಿ ಶರಣ್ ಪಂಪವೆಲ್ ವಿರುದ್ಧ ಅಪಪ್ರಚಾರ: ಆರೋಪಿಗಳ ಬಂಧನಕ್ಕೆ ಆಗ್ರಹ

Pinterest LinkedIn Tumblr

ಮಂಗಳೂರು : ವಿಶ್ವ ಹಿಂದು ಪರಿಷತ್ತಿನ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಮೇಲೆ ಅಪಪ್ರಚಾರ ಮಾಡುವ ದುಷ್ಟ ಶಕ್ತಿಗಳನ್ನು ಕೂಡಲೇ ಬಂಧನಕ್ಕೆ ಒಳಪಡಿಸಬೇಕು ಎಂದು ವಿಶ್ವ ಹಿಂದು ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯದರ್ಶಿ ಕೃಷ್ಣ ಮೂರ್ತಿ ಆಗ್ರಹಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಯಾವುದಾದರೂ ಅಹಿತಕರ ಘಟನೆಗಳು ನಡೆದಾಗ ಅದನ್ನು ಚಿತ್ರೀಕರಿಸಿ ಆಧುನಿಕ ಅಂತರ್ಜಾಲದ ಮೂಲಕ ಅನಗತ್ಯ ಸುಳ್ಳು ವಿಷಯಗಳನ್ನು ಸೇರಿಸಿ ವಿಶ್ವ ಹಿಂದು ಪರಿಷತ್ತಿನ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಮೇಲೆ ನಿರಾಧಾರ ಆರೋಪಗಳನ್ನು ಮಾಡುತ್ತಿರುವುದನ್ನು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಪಪ್ರಚಾರ ಹಬ್ಬುತ್ತಿರುವ ವಿಷಯ ಬಹಳ ಖೇಧಕಾರಿಯಾಗಿದೆ.

ಇದರ ಹಿಂದಿರುವ ದುಷ್ಟಶಕ್ತಿಗಳನ್ನು ಪತ್ತೆಹಚ್ಚಿ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮತ್ತು ಇಂತಹ ವಿಷಯ ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಡಳಿತವನ್ನು ಕೃಷ್ಣ ಮೂರ್ತಿ ಅವರು ಆಗ್ರಹಿಸಿದ್ದಾರೆ.

ಈಗಾಗಲೇ ನಮ್ಮ ಸಂಘಟನೆಯ ಕಾರ್ಯಕರ್ತರು ಈ ಬಗ್ಗೆ ಹೋರಾಟ ಮಾಡಬೇಕೆಂದು ಇಚ್ಛೆಯನ್ನು ವ್ಯಕ್ತಪಡಿಸಿದರೂ ಸಾಮಾಜಿಕ ಹಿತಾಸಕ್ತಿಯಿಂದ ಅದನ್ನು ನಡೆಸದಂತೆ ಸೂಚನೆ ನೀಡಿದ್ದು ಈ ಬಗ್ಗೆ ತಕ್ಷಣವೇ ಸೂಕ್ತ ಕಾನೂನು ಕ್ರಮಗಳಾಗದಿದ್ದಲ್ಲಿ ಮುಂದೆ ಆಗಬಹುದಾದ ಘಟನೆಗಳಿಗೆ ಜಿಲ್ಲಾಡಳಿತವೇ ಹೊಣೆಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Comments are closed.