
ಮಂಗಳೂರು : ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ನೂತನ ಸಚಿವರಾಗಿ ಆಯ್ಕೆ ಗೊಂಡಿರುವ ಶ್ರೀ ಎಸ್. ಅಂಗಾರ ಅವರು ಜಿಲ್ಲೆಯ ಶ್ರೀ ಮಂಜುನಾಥನ ಕ್ಷೇತ್ರಗಳಾದ ಮಂಗಳೂರಿನ ಶ್ರೀ ಕ್ಷೇತ್ರ ಕದ್ರಿ ಹಾಗು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.

ಶ್ರೀ ಕ್ಷೇತ್ರ ಕದ್ರಿಗೆ ಭೇಟಿಯಿತ್ತ ಸಂದರ್ಭ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಅವರು ಸಚಿವರಿಗೆ ಸಾಹಿತ್ಯ ಪರಿಷತ್ತಿನ ವತಿಯಿಂದ ಅಭಿನಂದನಾ ಪತ್ರದೊಂದಿಗೆ ಶಾಲು ಹೊದಿಸಿ ಅಭಿನಂದಿಸಿದರು.
ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಭೇಟಿ:
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಭೇಟಿ ಮಾಡಿದ ಸಚಿವರು ಅವರೊಂದಿಗೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಪಂಚಾಯತ್ ಸದಸ್ಯ ಕೊರಗಪ್ಪ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.
Comments are closed.