ಉಡುಪಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಜನವರಿ 18 ಮತ್ತು 19ರಂದು ಎರಡು ದಿನಗಳ ಕಾಲ ಉಡುಪಿ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು (ಜ. 18ರಂದು) ಸಂಜೆ 3 ಗಂಟೆಗೆ ಸಿಎಂ ಬಿ.ಎಸ್.ವೈ ಉಡುಪಿಗೆ ಆಗಮಿಸಲಿದ್ದಾರೆ.
ಸೋಮವಾರ ಸಂಜೆ 5 ಗಂಟೆಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಸಿಎಂ ಭೇಟಿ ನೀಡಲಿದ್ದಾರೆ. ಹಾಗೂ ನೂತನ ದರ್ಶನದ ಹಾದಿ ವಿಶ್ವ ಪಥದ ಉದ್ಘಾಟನೆ ನಡೆಸಲಿದ್ದಾರೆ. ಪರ್ಯಾಯ ಸಂಪ್ರದಾಯದ 500 ವರ್ಷಗಳ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಲಿದ್ದಾರೆ.
ಇನ್ನು ನಾಳೆ (ಜ. 19ರಂದು) ಬೆಳಿಗ್ಗೆ ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಹೆಜಮಾಡಿ ಕೋಡಿ ಮೀನುಗಾರಿಕಾ ಬಂದರಿನ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮಧ್ಯಾಹ್ನ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಗಣಹೋಮ ಕಾರ್ಯಕ್ರಮದಲ್ಲಿ ಪಾಲ್ಘೊಳ್ಳುವರು.
ಬಳಿಕ ಯುವ ಮೆರಿಡಿಯನ್ ಹೆಲಿಪ್ಯಾಡ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.