ಕರಾವಳಿ

ಮದುವೆ ಹಾಗು ಇನ್ನಿತರ ಕಾರ್ಯಕ್ರಮಗಳಲ್ಲಿ ಡ್ರೋನ್ ಬಳಕೆಗೆ ಕಡಿವಾಣ : ಸೂಕ್ತ ಕಾನೂನು ಕ್ರಮದ ಎಚ್ಚರಿಕೆ

Pinterest LinkedIn Tumblr

ಮಂಗಳೂರು, ಜನವರಿ18: ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಅನಾಧಿಕೃತ ವಾಗಿ UIN /UAOP ಇಲ್ಲದೇ ಡ್ರೋನ್ ಉಪಯೋಗಿಸುತ್ತಿರುವ ಬಗ್ಗೆ ಮಂಗಳೂರು ನಗರ ಪೊಲೀಸ್ ಅಯುಕ್ತರು ತುಂಬಾ ಗರಂ ಆಗಿದ್ದಾರೆ.

ಈ ಬಗ್ಗೆ ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಂಗಳೂರು ನಗರ ಪೊಲೀಸ್ ಅಯುಕ್ತ ಎನ್. ಶಶಿಕುಮಾರ್ ಅವರು, ಡ್ರೋನ್ ಬಳಸಲು ಮುಂದಾಗುವವರು ಅಥವಾ ಡ್ರೋನ್ ಹೊಂದಿರುವವರು ಸಂಬಂಧಪಟ್ಟ ಇಲಾಖೆಯಿಂದ DGCA ಯವರ ಮಾರ್ಗಸೂಚಿಯಂತೆ ಎಲ್ಲಾ ವರ್ಗದ ಡ್ರೋನ್ ಉಪಯೋಗಿಸಲು ಅನುಮತಿ ಪಡೆಯುವುದು ಕಡ್ಡಾಯ ಎಂಬ ಆದೇಶ ಹೊರಡಿಸಿದ್ದಾರೆ.

ನಗರದಲ್ಲಿ ಅವ್ಯಾಹತವಾಗಿ ಡ್ರೋನ್‌ಗಳನ್ನು ಬಳಕೆ ಮಾಡುತ್ತಿರುವುದು ಕಂಡುಬಂದಿದೆ. ಮದುವೆ, ವಿಐಪಿ ಕಾರ್ಯಕ್ರಮ ಸೇರಿದಂತೆ ಯಾವುದೇ ಖಾಸಗಿ ಕಾರ್ಯಕ್ರಮಗಳಲ್ಲಿ ಡಿಜಿಸಿಎ ನಿಯಮ ಉಲ್ಲಂಘಿಸಿ ಡ್ರೋನ್ ಬಳಕೆಯಾಗುತ್ತಿದ್ದಲ್ಲಿ ಅವುಗಳನ್ನು ವಶಪಡಿಸಿ ಹಾರಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಯುಕ್ತರು ಎಚ್ಚರಿಕೆ ನೀಡಿದ್ದಾರೆ.

Comments are closed.