ಕರಾವಳಿ

ರಾಜ್ಯದಲ್ಲಿ ಇಂದಿನಿಂದ ‘ಗೋ ಹತ್ಯೆ ನಿಷೇಧ’ ಕಾಯ್ದೆ ಜಾರಿ: ಉಡುಪಿಯಲ್ಲಿ ಗೋಪೂಜೆ ಮಾಡಿ ಸಿಎಂ ಬಿ.ಎಸ್.ವೈ ಘೋಷಣೆ

Pinterest LinkedIn Tumblr

ಉಡುಪಿ: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಇಂದಿನಿಂದ (ಜ.18) ಜಾರಿಗೆ ಬಂದಿದ್ದು ಉಡುಪಿಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕರಂಬಳ್ಳಿಯಲ್ಲಿರುವ ವೆಂಕಟರಮಣ ದೇವಳದಲ್ಲಿ ಗೋಪೂಜೆ ನಡೆಸುವ ಮೂಲಕ ಅಧಿಕೃತ ಚಾಲನೆ ನೀಡಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು
ಸ್ವಾತಂತ್ರ್ಯ ಸಿಕ್ಕಿದ ತಕ್ಷಣ ಗೋಹತ್ಯೆ ನಿಷೇಧವಾಗಬೇಕೆಂದು ಮಹಾತ್ಮ ಗಾಂಧೀಜಿ ಬಯಸಿದ್ದರು. ಅದರಂತೆ ಕರ್ನಾಟಕದಲ್ಲಿ ಇಂದಿನಿಂದ ಗೋಹತ್ಯೆ ನಿಷೇಧ ಜಾರಿಯಾಗುತ್ತಿದೆ. ಈ‌ ಮೂಲಕವಾಗಿ ಮಹಾತ್ಮ ಗಾಂಧೀಜಿಯವರ ಕನಸು ನನಸಾಗುತ್ತಿದೆ ಎಂದರು.

ರಾಜ್ಯದ ಜನರ ಅಪೇಕ್ಷೆಯಂತೆ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿದ್ದೇವೆ. ಇದೊಂದು ಐತಿಹಾಸಿಕ ನಿರ್ಣಯವಾಗಿದ್ದು, ಇನ್ನು ಮುಂದೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗೋಹತ್ಯೆಗೆ ಅವಕಾಶವಿಲ್ಲ. ಉಡುಪಿಯಲ್ಲಿ ಗೋವಿಗೆ ಪೂಜೆ ಮಾಡಿ ಇದಕ್ಕೆ ಚಾಲನೆ ನೀಡಿದ್ದೇವೆ ಈ ಕಾನೂನಿಗೆ ಎಲ್ಲರೂ ಸಹಕರಿಸಬೇಕು ಎಂದರು.

ಈ‌ ಸಂಧರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಶ್ವೇಶ್ವರ ಹೆಗ್ಗಡೆ ಕಾಗೇರಿ, ಉಡುಪಿ ಶಾಸಕ ರಘುಪತಿ ಭಟ್,ಯಶ್ ಪಾಲ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

Comments are closed.