ಕರಾವಳಿ

ದ.ಕ.ಜಿಲ್ಲೆಯ ಮಲೆನಾಡು ಅಭಿವೃದ್ಧಿ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಲು ಸೂಚನೆ

Pinterest LinkedIn Tumblr

ಮಂಗಳೂರು, ಜನವರಿ 21 : ಜಿಲ್ಲೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪ್ರತಿಶತ ನೂರರಷ್ಟು ಪೂರ್ಣಗೊಳಿಸಬೇಕು ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರು ಮೂರ್ತಿರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ನಗರದ ಸಕ್ರ್ಯೂಟ್ ಹೌಸ್‍ನಲ್ಲಿದಕ್ಷಿಣಕನ್ನಡಜಿಲ್ಲೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಈಗಾಗಲೇ ಅನುಮೋದನೆಗೊಂಡ ಕಾಮಗಾರಿಗಳನ್ನು ಜನವರಿ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಪ್ರಸ್ತುತ ಅನುಮೋದನೆಗೆ ಸಲ್ಲಿಸಿರುವ 80 ಕಾಮಗಾರಿಗಳನ್ನು ಮಾರ್ಚ್‍ಎ ರಡನೇ ವಾರದೊಳಗಾಗಿ ಪೂರ್ಣಗೊಳಿಸಬೇಕು ಎಂದರು.

ಜಿಲ್ಲೆಯಲ್ಲಿಒಟ್ಟಾರೆ 94 ಕಾಮಗಾರಿಗಳನ್ನು 8.07 ಕೋಟಿರೂ.ಗಳ ಮೊತ್ತದಲ್ಲಿ ಕೈಗೊಳ್ಳಲಾಗಿದೆ. ಈ ಆರ್ಥಿಕ ವರ್ಷದಲ್ಲಿಅನುದಾನ ಬಿಡುಗಡೆ ಮಾಡಲಾಗಿದೆಎಂದು ಅವರು ಬಿಡುಗಡೆ ಮಾಡಿದ ಅನುದಾನವನ್ನು ಯಾವುದೇ ಕಾರಣಕ್ಕೂ ವಾಪಸಗದಂತೆ ಎಚ್ಚರ ವಹಿಸಬೇಕು ಎಂದರು.

ಸಭೆಯಲ್ಲಿಜಿಲ್ಲಾ ಪಂಚಾಯತ್‍ಅಧ್ಯಕ್ಷ ಮೀನಾಕ್ಷಿ ಶಾಂತಿಗೋಡು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ, ಮಂಡಳಿ ಸದಸ್ಯರಾದರಾಮಅಮಿನ್ ಪಚ್ಚಾಡಿ ಹಾಗೂ ಮಂಡಳಿಯ ಕಾರ್ಯದರ್ಶಿ ಕೆ.ಎಸ್. ಮಣಿ, ಲೋಕೋಪಯೋಗಿ ಇಲಾಖೆ, ಪಂಚಾಯತ್‍ರಾಜ್‍ಇಂಜಿನಿಯರಿಂಗ್ ವಿಭಾಗ, ಕರ್ನಾಟಕ ರೂರಲ್‍ ಇನ್ಫಾಸ್ಟ್ರಕ್ಚರ್‍ಡೆವಲಪ್‍ಮೆಂಟ್ ಲಿಮಿಟೆಡ್, ಮಹಾನಗರ ಪಾಲಿಕೆ ಅಭಿಯಂತರುಗಳು ಮಂಗಳೂರು ಹಾಗೂ ನಿರ್ಮಿತಿಕೇಂದ್ರಯೋಜನಾ ನಿರ್ದೇಶಕ ಹಾಗೂ ಜಿಲ್ಲಾ ಮಟ್ಟ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Comments are closed.