ಮಂಗಳೂರು, ಜನವರಿ.21: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈಯಿಂದ ಬಂದಿಳಿದ ಓರ್ವ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ ಆರೋಪದ ಮೇಲೆ ಕಸ್ಟಮ್ಸ್ ಅಧಿಕಾರಿಗಳು ಅತನನ್ನು ಬಂಧಿಸಿ ಸುಮಾರು 44.2 ಲಕ್ಷ ಮೌಲ್ಯದ 0.8 ಕೆ.ಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ಉಬೈದ್ ಬಲಿಯಾತ್ ಅಜೀಜ್ ಎಂದು ಗುರುತಿಸಲಾಗಿದೆ. ಏರ್ ಇಂಡಿಯಾ ವಿಮಾನದ ಮೂಲಕ ದುಬೈಯಿಂದ ಬಂದಿಳಿದ ಈತ ಸುಮಾರು 44.2 ಲಕ್ಷ ಮೌಲ್ಯದ 0.8 ಕೆ.ಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿ ತಿಳಿಸಿದ್ದಾರೆ.
ಗುರುವಾರದಂದು ಈತ ದುಬೈಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ನಿಲ್ದಾಣದಲ್ಲಿ ತಪಾಸಣೆ ನಡೆಸುತ್ತಿದ್ದ ಸಂದರ್ಭ ಈತ ಗುದನಾಳದಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಬಚ್ಚಿಟ್ಟಿದ್ದು ಕಂಡುಬಂದಿದ್ದು, ಅನುಮಾನ ಬಾರದ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದ ಅಕ್ರಮ 800 ಗ್ರಾಂ ಚಿನ್ನ ಪತ್ತೆಯಾಗಿದೆ,
ಆರೋಪಿ ಬಳಿಯಿಂದ ಸುಮಾರು 44.2 ಲಕ್ಷ ಮೌಲ್ಯದ 0.8 ಕೆ.ಜಿ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.