ಕರಾವಳಿ

ಶಿವಮೊಗ್ಗ ಜಿಲೆಟಿನ್ ಸ್ಪೋಟ ದುರಂತ: ಉನ್ನತ ತನಿಖೆಗೆ ಆದೇಶಿಸಿದ ಸಿಎಂ ಬಿ.ಎಸ್.ವೈ

Pinterest LinkedIn Tumblr

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಹುಣಸೋಡು ಬಳಿ ಇರುವ ಬ್ರಹತ್ ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರೀ ಪ್ರಮಾಣದ ಜಿಲೆಟಿನ್ ಸ್ಪೋಟದಿಂದ ಹಲವು ಕಾರ್ಮಿಕರು ಸಾವನ್ನಪ್ಪಿದ್ದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಲ್ಲದೇ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು,‘ಶಿವಮೊಗ್ಗದ ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರಿ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿರುವ ಕುರಿತಂತೆ ಮುಖ್ಯಮಂತ್ರಿ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಇದೊಂದು ಆಘಾತಕಾರಿ, ದುರದೃಷ್ಟಕರ ಘಟನೆ ಎಂದಿರುವ ಮುಖ್ಯಮಂತ್ರಿಗಳು, ಮೃತರ ಆತ್ಮಕ್ಕೆ ಶಾಂತಿಯನ್ನು ಕೋರಿ, ಕುಟುಂಬದವರಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ನಿನ್ನೆ ತಡರಾತ್ರಿಯೇ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಘಟನೆ ಕುರಿತಂತೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ’.

ಇನ್ನು ಗುರುವಾರ ತಡರಾತ್ರಿ ಸಮಯದಲ್ಲಿ ಈ ಸ್ಫೋಟ ನಡೆದಿದ್ದು ಲಾರಿಯಲ್ಲಿದ್ದ ಎಂಟು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Comments are closed.