ಕರಾವಳಿ

ಬೃಹತ್ ಪ್ರಮಾಣದ ಗಾಂಜಾ ಸಾಗಾಟ : ಏಳು ಮಂದಿ ಬಂಧನ- 44.63 ಕೆಜಿ ಗಾಂಜಾ ಸಹಿತಾ 9,75,000 ರೂ.ಗಳ ಸೊತ್ತು ವಶ

Pinterest LinkedIn Tumblr

ಮಂಗಳೂರು, ಜನವರಿ.22 : ಮಂಗಳೂರು ಹೊರವಲಯದ ಉಳ್ಳಾಲ ಮತ್ತು ಕೊಣಾಜೆ ಠಾಣಾ ವ್ಯಾಪ್ತಿಗಳಲ್ಲಿ ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬಂಟ್ವಾಳ ನಿವಾಸಿ ಅಜೀಜ್ (44) ಮೊಯ್ದಿನ್ ಹಫೀಸ್ (34), ತೆಲಂಗಾಣ ಮೂಲದ ವಿಠಲ್ ಚವ್ಹಾಣ (35), ಮತ್ತು ಬೀದರ್ ಮೂಲದ ಸಂಜು ಕುಮಾರ್,(34) ಮತ್ತು ಕಲ್ಲಪ್ಪ (40), ಬಂಟ್ವಾಳ ನಿವಾಸಿ ಮೊಹಮ್ಮದ್ ಹಫೀಜ್ (23) ಮತ್ತು ಗುರುಪುರದ ನಿವಾಸಿ ಸಂದೀಪ್ ಎಂದು ಹೆಸರಿಸಲಾಗಿದೆ.

ಬೀದರ್ ಮತ್ತು ತೆಲಂಗಾಣದಿಂದ ಎರಡು ಕಾರುಗಳಲ್ಲಿ ಬೃಹತ್ ಪ್ರಮಾಣದ ಗಾಂಜಾವನ್ನು ಮಂಗಳೂರು ನಗರಕ್ಕೆ ಸಾಗಿಸಲಾಗುತ್ತಿರುವ ಬಗ್ಗೆ ಮಂಗಳೂರು ನಗರ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ಉಳ್ಳಾಲ ಹಾಗೂ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಳಿ ನಡೆಸಿ ಉಳ್ಳಾಲ ಹಾಗೂ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 7 ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 44.63 ಕೆ.ಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ನರಿಂಗಾನದ ತೌಡುಗೋಳಿ ಕ್ರಾಸ್ ನಿವಾಸಿ ಅಬ್ದುಲ್ ಅಝೀಝ್ ಯಾನೆ ಪೋಕರ್ ಅಝೀಝ್ (40) ಮತ್ತು ಹಫೀಝ್ ಯಾನೆ ಅಪ್ಪಿ ಯಾನೆ ಮೊಯ್ದಿನ್(34) ಎಂಬವರನ್ನು ಕುತ್ತಾರಿನಲ್ಲಿ ಸಿಸಿಬಿ ತಂಡ ಬಂಧಿಸಿದೆ. ಬಂಧಿತರಿಂದ 23.980 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ಉಳ್ಳಾಲ ಪೊಲೀಸರಿಗೆ ಒಪ್ಪಿಸಲಾಗಿದೆ. ಈ ಪ್ರಕರಣವನ್ನು ಉಳ್ಳಾಲ ಪೊಲೀಸರು ಮತ್ತಷ್ಟು ತನಿಖೆ ನಡೆಸಿದ್ದು, ಬಂಟ್ವಾಳ ನಿವಾಸಿ ಮೊಹಮ್ಮದ್ ಹಫೀಜ್ (23) ಮತ್ತು ಗುರುಪುರದ ನಿವಾಸಿ ಸಂದೀಪ್ ಅವರನ್ನು ಬಂಧಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಮಂಗಳೂರು ಹೊರವಲಯದ ದೇರಳಕಟ್ಟೆಯಿಂದ ಮುಡಿಪು ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣ ಮೂಲದ ವಿಠಲ್ ಚೌಹಾನ್ ಮತ್ತು ಬೀದರ್ ನಿವಾಸಿಗಳಾದ ಸಂಜೀವ್ ಕುಮಾರ್, ಕಲ್ಲಪ್ಪ ಬಂಧಿತ ಆರೋಪಿಗಳು. ದೇರಳಕಟ್ಟೆಯಿಂದ ಮುಡಿಪು ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 15 ಕೆ.ಜಿ. ಗಾಂಜಾ ಹಾಗೂ ಸಾಗಾಟಕ್ಕೆ ಬಳಸಲಾದ ಮಹಾರಾಷ್ಟ್ರ ನೋಂದಾಯಿತ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯ ಪ್ರಕರಣ ದಾಖಲಾಗಿದೆ.

ಎರಡು ಪ್ರಕರಣಗಳಲ್ಲಿ 9,75,000 ರೂ.ಗಳ ಒಟ್ಟು 44.63 ಕೆಜಿ ಗಾಂಜಾ, ಎರಡು ಕಾರುಗಳು, ಒಂದು ಸ್ಕೂಟರ್, ಏಳು ಮೊಬೈಲ್ ಫೋನ್‌ಗಳು ಮತ್ತು 23,25,000 ರೂ., ನಗದನ್ನುವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ಪೈಕಿ, ಕೊಣಾಜೆ ಪೊಲೀಸ್ ಠಾಣೆಯಲ್ಲಿ 3 ಗಾಂಜಾ ಪ್ರಕರಣಗಳು ಮತ್ತು ಕಾವೂರು ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ತಲಾ ಒಂದು ಪ್ರಕರಣಗಳು ಅಜೀಜ್ ವಿರುದ್ಧ ದಾಖಲಾಗಿವೆ, ಹನೀಜ್ ವಿರುದ್ಧ ಕೊಣಾಜೆ ಪೊಲೀಸ್ ಠಾಣೆ ಸೇರಿದಂತೆ 6 ಪ್ರಕರಣಗಳು ದಾಖಲಾಗಿವೆ, ಸಂಜು ಕುಮಾರ್ ವಿರುದ್ಧ ಆಂಧ್ರಪ್ರದೇಶದಲ್ಲಿ ಪ್ರಕರಣಗಳು ದಾಖಲಾಗಿವೆ. ಕಲ್ಲಪ್ಪ ಮತ್ತು ವಿಠಲ್ ಚವ್ಹಾಣ ವಿರುದ್ಧ ಆಂಧ್ರಪ್ರದೇಶದಲ್ಲಿ ಕೊಲೆ ಪ್ರಕರಣ ದಾಖಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

Comments are closed.