ಕರಾವಳಿ

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಬಂತು 12 ಇ.ಆರ್.ಎಸ್.ಎಸ್. ವಾಹನಗಳು- ಎಸ್ಪಿಯಿಂದ ಚಾಲನೆ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯಲ್ಲಿ 12 ಇ.ಆರ್.ಎಸ್.ಎಸ್. ವಾಹನಗಳನ್ನು ಚಾಲನೆಗೊಳಿಸಲಾಗಿದೆ. ಉಡುಪಿ ಎಸ್ಪಿ ವಿಷ್ಣುವರ್ಧನ್ ವಾಹನಗಳಿಗೆ ಚಾಲನೆ ನೀಡಿದರು.

ಸಾರ್ವಜನಿಕರು ಇನ್ನು ಮುಂದಕ್ಕೆ ಟೋಲ್ ಫ್ರೀ ನಂಬರ್ 100ರ ಬದಲಾಗಿ 112ಕ್ಕೆ ಕರೆ ಮಾಡಿದಲ್ಲಿ ಅವಶ್ಯಕತೆ ಇರುವ ಸ್ಥಳಕ್ಕೆ ಅತೀ ಸಮೀಪ ಇರುವ ಇ.ಆರ್.ಎಸ್.ಎಸ್. ವಾಹನವು ಸ್ಥಳಕ್ಕೆ ಬಂದು ಅಗತ್ಯ ಸೇವೆಯನ್ನು ಸಲ್ಲಿಸಲಿದೆ. ಈ ವಾಹನವು ದಿನದ 24 ಘಂಟೆಯೂ ಕಾರ್ಯಾಚರಿಸಲಿದೆ.

ಟೋಲ್ ಪ್ರೀ ನಂಬರ್ 112 ನೇರವಾಗಿ ಬೆಂಗಳೂರು ಕೇಂದ್ರದ ನಿಯಂತ್ರಣದಲ್ಲಿದ್ದು, ಅಕ್ಷಾಂಶ ಹಾಗೂ ರೇಖಾಂಶದ ಆಧಾರದ ಮೇಲೆ, ಕರೆ ಬಂದ ಸ್ಥಳಕ್ಕೆ ಕ್ಷಿಪ್ರವಾಗಿ ಅಗತ್ಯ ಸೇವೆಯನ್ನು ಸಲ್ಲಿಸಲು ಪ್ರತೀ ವಾಹನದಲ್ಲಿ ಓರ್ವ ಎ.ಎಸ್.ಐ. ದರ್ಜೆಯ ಪೊಲೀಸ್ ಅಧಿಕಾರಿ ಇರಲಿದ್ದಾರೆ.

ಈ ವಾಹನಗಳು ಈ ಹಿಂದಿನ ದಿನಗಳಲ್ಲಿ ಹೆಚ್ಚಿನ ಅಪರಾಧ ಕೃತ್ಯಗಳು ನಡೆದ ಸ್ಥಳಗಳು, ಶಾಲಾ, ಕಾಲೇಜುಗಳ ಸಮೀಪ, ಜನ ದಟ್ಟಣೆ ಪ್ರದೇಶ, ಹೆಚ್ಚು ವಾಹನ ಸಂಚಾರ ಇರುವ ಪ್ರದೇಶಗಳಲ್ಲಿ ಕಾರ್ಯಾಚರಿಸಲಿದೆ.

ಸಾರ್ವಜನಿಕರು, ಅಪಘಾತ ಅಥವಾ ಯಾವುದೇ ತರಹದ ಅಪರಾಧಗಳು ನಡೆದಲ್ಲಿ ತಕ್ಷಣವೇ ಟೋಲ್ ಪ್ರೀ ನಂಬರ್ 112 ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ.

Comments are closed.