
ಬೆಂಗಳೂರು / ಚಾಮರಾಜನಗರ : ಫೆಬ್ರವರಿ 1ರಿಂದ ಪ್ರಥಮ ಪಿಯುಸಿ ಕಾಲೇಜು ಆರಂಭಿಸ ಲಾಗುತ್ತದೆ. ಫೆ.1ರಿಂದ ಪ್ರಥಮ ಪಿಯು ಕಾಲೇಜು ಆರಂಭದ ಬಗ್ಗೆ ತೀರ್ಮಾನ ಕೈಗೊಳ್ಳುವ ನಿಟ್ಟಿನಲ್ಲಿ ಜ.27ರಂದು ಆರೋಗ್ಯ ಸಚಿವರ ಜತೆ ಚರ್ಚಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ ತಿಂಗಳಲ್ಲಿ ದ್ವಿತೀಯ ಪಿಯುಸಿ, ಜೂನ್ ನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗುವುದು. ಜೂನ್ ನಂತರ ಉಳಿದ ತರಗತಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಕೊರೋನಾ ಸೋಂಕಿನ ಭೀತಿಯ ನಡುವೆ ರಾಜ್ಯದಲ್ಲಿ ಬೋರ್ಡ್ ಪರೀಕ್ಷೆಗಳಿರುವಂತ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಗೊಂಡಿದೆ. ಇಂತಹ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ಜೂನ್ ತಿಂಗಳಿನಲ್ಲಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೇ ತಿಂಗಳಿನಲ್ಲಿ ನಡೆಸಲಾಗುತ್ತದೆ ಎಂದು ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.
Comments are closed.