ಕರಾವಳಿ

ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಸ್ಫರ್ಧೆಯಲ್ಲಿ ಮಂಗಳೂರು ವಿ.ವಿ.ಗೆ 3 ಪ್ರಶಸ್ತಿಗಳು

Pinterest LinkedIn Tumblr

ಮಂಗಳೂರು, ಜನವರಿ 26 : ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ಜನವರಿ 20 ಮತ್ತು 21 ರಂದು ರಾಜ್ಯಮಟ್ಟದ ಕನ್ನಡ ವಿಜ್ಞಾನ ಉಪನ್ಯಾಸ ಸ್ಫರ್ಧೆ ಚಿತ್ರದುರ್ಗದಲ್ಲಿ ನಡೆಯಿತು.

ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ವಿದ್ಯಾರ್ಥಿನಿ ಯರಾದ ಸೌಜನ್ಯ- ರಸಾಯನಶಾಸ್ತ್ರ ಪ್ರಥಮ ಸ್ಥಾನ, ಶುಭಶ್ರೀ ಎಸ್ ಶೆಣೈ-ಭೌತಶಾಸ್ತ್ರ ಪ್ರಥಮ ಸ್ಥಾನ ಹಾಗೂ ಕಾರ್ಕಳದ ಭುವನೇಂದ್ರ ಕಾಲೇಜಿನ ವಿದ್ಯಾರ್ಥಿನಿ ಕೀರ್ತಿ ಗೋಖಲೆ-ಜೀವವಿಜ್ಞಾನ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ರಾಜ್ಯದ ಎಲ್ಲಾ 11 ವಿಶ್ವವಿದ್ಯಾನಿಲಯಗಳ ಪ್ರಥಮ ಹಾಗೂ ದ್ವಿತೀಯ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳು ಸ್ಫರ್ಧೆಯಲ್ಲಿ ಭಾಗವಹಿಸಿದ್ದರು.

ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಗಳ ಸಂಯೋಜಕರಾದ ಮಂಗಳೂರು ರಥಬೀದಿಯ ಡಾ.ಪಿ. ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ.ಕೃಷ್ಣಪ್ರಭ. ಎಂ ಹಾಗೂ ಪೂರ್ಣಪ್ರಜ್ಞ ಕಾಲೇಜಿನ ಉಪನ್ಯಾಸಕಿ ಮೇಘನಾ ವಿದ್ಯಾರ್ಥಿಗಳ ತಂಡದ ನೇತೃತ್ವ ವಹಿಸಿದ್ದರು.

Comments are closed.