ಕರಾವಳಿ

ದ.ಕ.ಜಿಲ್ಲೆಯಲ್ಲಿ 72ನೇ ಗಣರಾಜ್ಯೋತ್ಸವ ಸಂಭ್ರಮ : ಸಚಿವ ಶ್ರೀನಿವಾಸ ಪೂಜಾರಿಯವರಿಂದ ಧ್ವಜಾರೋಹಣ

Pinterest LinkedIn Tumblr

ಮಂಗಳೂರು, ಜನವರಿ 26 : ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದ 72ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಇಂದು (ಜನವರಿ 26 ರಂದು) ಬೆಳಗ್ಗೆ 9 ಗಂಟೆಗೆ ನಗರದ ನೆಹರು ಮೈದಾನದಲ್ಲಿ ಜರಗಿತು.

ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವ ಸಂದೇಶವನ್ನು ನೀಡಿದರು. ಬಳಿಕ ವಿವಿಧ ವಿಭಾಗಗಳ ಸಾಧಕರನ್ನು ಅತಿಥಿಗಳು ಸನ್ಮಾನಿಸಿ ಗೌರವಿಸಿದರು.

ಸಮಾರಂಭದಲ್ಲಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಮಂಗಳೂರು, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಹಾನಗರ ಪಾಲಿಕೆಯ ಮಹಾಪೌರರಾದ ದಿವಾಕರ ಪಾಂಡೇಶ್ವರ್, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ನಿತೀನ್ ಕುಮಾರ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‍ನ ಅಧ್ಯಕ್ಷ ಸಂತೋಷ ರೈ ಬೋಲಿಯಾರ್, ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ. ಜಗದೀಶ್ ಪೈ, ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷ ಎಸ್ ಪ್ರದೀಪ್ ಕುಮಾರ್ ಕಲ್ಕೂರ, ಕರ್ನಾಟಕ ಅರೆ ಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀ ನಾರಾಯಣ ಕಜೆಗದ್ದೆ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರು, ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೋಯ್ಲಸ್ ಡಿ’ಸೋಜಾ, ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ. ಆರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಮ್. ಲಕ್ಷ್ಮೀ ಪ್ರಸಾದ್, ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಇನ್ನಿತರ ಇಲಾಖೆಯ ಅಧಿಕಾರಗಳು ಉಪಸ್ಥಿತರಿರುವರು.

Comments are closed.