ಕರಾವಳಿ

ದ.ಕ. ಜಿಲ್ಲಾ 24ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಎಂ ಪ್ರಭಾಕರ ಜೋಶಿ ಆಯ್ಕೆ

Pinterest LinkedIn Tumblr

ಡಾ. ಎಂ. ಪ್ರಭಾಕರ ಜೋಶಿ

ಮಂಗಳೂರು : ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ ಶಾರದಾ ವಿದ್ಯಾಲಯದಲ್ಲಿ 2021 ಫೆಬ್ರವರಿ, 12 ಶುಕ್ರವಾರ, 13 ಶನಿವಾರ, 14 ಭಾನುವಾರ ಮೂರು ದಿನಗಳ ಕಾಲ ಕೋವಿಡ್-19 ಸರಕಾರದ ನಿಯಮಾನುಸಾರ  ಜರಗಲಿರುವ ದಕ್ಷಿಣ ಕನ್ನಡ ಜಿಲ್ಲಾ 24ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ವಿದ್ವಾಂಸ, ಯಕ್ಷಗಾನ ಅರ್ಥದಾರಿ ಡಾ. ಎಂ. ಪ್ರಭಾಕರ ಜೋಶಿ ಆಯ್ಕೆಗೊಂಡಿರುವರು.

ಡಾ. ಜೋಶಿಯವರನ್ನು ಕನ್ನಡ ಶಾಲು ಹೊದೆಸುವ ಮೂಲಕ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಸ್ವಾಗತಿಸಿದರು.

ಈ ಸಂದರ್ಭ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ, ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ. ಮೋಹನ್ ರಾವ್, ಮಂಗಳೂರು ತಾಲೂಕು ಕ.ಸಾ.ಪ. ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ ಬಿ. ಶೆಟ್ಟಿ, ಗೌರವ ಕೋಶಾಧ್ಯಕ್ಷೆ ಪೂರ್ಣಿಮಾ ರಾವ್ ಪೇಜಾವರ, ಪೊಳಲಿ ನಿತ್ಯಾನಂದ ಕಾರಂತ, ಎಕ್ಕಾರು ಪದ್ಮನಾಭ ಭಟ್, ಶಿವಶಂಕರ್, ಪ್ರಭಾಕರ ಪ್ರಭು ಉಪಸ್ಥಿತರಿದ್ದರು.

Comments are closed.