ಮಂಗಳೂರು : ಅಪರಿಚಿತ ದುಷ್ಕರ್ಮಿಗಳು ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ನಗರದ ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳದ ಗಣೇಶಪುರದಲ್ಲಿ ಬುಧವಾರ ತಡ ರಾತ್ರಿ ನಡೆದಿದೆ.
ಚೂರಿ ಇರಿತಕ್ಕೆ ಒಳಗಾದ ಯುವಕನ್ನು ಜಾಬಿರ್ (20) ಎಂದು ಗುರುತಿಸಲಾಗಿದೆ.
ಬುಧವಾರ ತಡರಾತ್ರಿ ಈ ಘಟನೆ ನಡೆದಿದ್ದು, ಇವರು ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಜಾಬೀರ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.