ಕರಾವಳಿ

ಜನವರಿ.31ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲ್ಲಿದ್ದಾರೆ ಸಚಿವ ಕೆ.ಎಸ್. ಈಶ್ವರಪ್ಪ

Pinterest LinkedIn Tumblr

ಮಂಗಳೂರು, ಜನವರಿ 29 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪ ರವರು ಜನವರಿ 31 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಜನವರಿ 31 ರಂದು ಬೆಳಿಗ್ಗೆ 10.30 ಗಂಟೆಗೆ ಬಂಟ್ವಾಳ ತಾಲೂಕಿನ ಸ್ಪರ್ಶ ಸಭಾಂಗಣದಲ್ಲಿ ಬಂಟ್ವಾಳ ತಾಲೂಕಿನ ನರಿಕೊಂಬು ಮತ್ತು ಸರಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

12.30 ಕ್ಕೆ ಕಡಬ ತಾಲೂಕಿನ ಕೊಂಬಾರು ಗ್ರಾಮಕ್ಕೆ ಭೇಟಿ ನೀಡಿ, ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 2.30 ಕ್ಕೆ ಧರ್ಮಸ್ಥಳಕ್ಕೆ ತೆರಳುವರು. ಮಧ್ಯಾಹ್ನ 3.40 ಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆ ರತ್ನವರ್ಮ ಕ್ರೀಡಾಂಗಣದಲ್ಲಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯತ್ ಸದಸ್ಯರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರಾತ್ರಿ 8 ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Comments are closed.