ಕರಾವಳಿ

ನಾಳೆ ಪತ್ರಕರ್ತರ ಗ್ರಾಮ ವಾಸ್ತವ್ಯ -ಜಾಗೃತಿ ಶಿಬಿರ : ಸಚಿವ ಕೆ.ಎಸ್.ಈಶ್ವರಪ್ಪರಿಂದ ಉದ್ಘಾಟನೆ

Pinterest LinkedIn Tumblr

ಮಂಗಳೂರು, ಜನವರಿ.30: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಡಬ ತಾಲೂಕು ಪತ್ರಕರ್ತರ ಸಂಘದ ಆತಿಥ್ಯದಲ್ಲಿ ,ಜಿಲ್ಲಾಡಳಿತ, ವಿವಿಧ ಇಲಾಖೆಗಳ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರ ದೊಂದಿಗೆ ‘ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರ’ ಜ.31ರಂದು ಸಿರಿಬಾಗಿಲು -ಕೊಂಬಾರು ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ.

ರವಿವಾರ ಬೆಳಗ್ಗೆ 10:00 ಗಂಟೆಗೆ ಪತ್ರಕರ್ತರ ಗ್ರಾಮ ವಾಸ್ತವ್ಯದ ಉದ್ಘಾಟನೆಯನ್ನು ಗ್ರಾಮೀಣಾವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ನೆರವೇರಿಸಲಿರುವರು.

ಆರೋಗ್ಯ ತಪಾಸಣಾ ಶಿಬಿರವನ್ನು ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್.ಅಂಗಾರ ಉದ್ಘಾಟಿಸುವರು. ಕುತ್ಲೂರು ಮತ್ತು ಮಡಪ್ಪಾಡಿಯಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯದ ಮಾಹಿತಿ ಕೈಪಿಡಿ ಯನ್ನು ಮಂಗಳೂರು ಶಾಸಕ ಯು.ಟಿ.ಖಾದರ್ ಬಿಡುಗಡೆಗೊಳಿಸಲಿರುವರು. ಸ್ವಚ್ಛ ಪರಿಸರ,ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನಕ್ಕೆ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಚಾಲನೆ ನೀಡಲಿದ್ದಾರೆ.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಶಾಸಕರಾದ ಸಂಜೀವ ಮಠಂದೂರು , ಹರೀಶ್ ಪೂಂಜಾ,ವಿಧಾನ ಪರಿಷತ್ಸದಸ್ಯರಾದ ಪ್ರತಾಪ್ ಸಿಂಹ ನಾಯಕ್,ಎಸ್.ಎಲ್. ಭೋಜೇಗೌಡ,ದ.ಕ.ಜಿ. ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,
ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಆರಣ್ಯ ಉಪ ಸಂರಕ್ಷಣಾಧಿಕಾರಿಡಾ.ವಿ.ಕರಿಕಲನ್ , ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ , ಕಡಬ ತಹಶೀಲ್ದಾರ್ ಅನಂತ ಶಂಕರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ,ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್,
ಎ.ಜೆ.ಸಮೂಹ ಸಂಸ್ಥೆ ಯ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ, ಎಜೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಡೀನ್ ಡಾ.ಅಶೋಕ್, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎ.ಶಾಂತಾರಾಮ ಶೆಟ್ಟಿ, ಗೌರವ ಕಾರ್ಯ ದರ್ಶಿಕೆ.ಎ.ಪ್ರಭಾಕರ ಶರ್ಮ, ಏಶ್ಯನ್ ಪತ್ರಕರ್ತರ ಒಕ್ಕೂಟದ ಸಂಚಾಲಕ ಹೆಚ್.ಬಿ. ಮದನ ಗೌಡ,ಕೆಯುಡಬ್ಲ್ಯುಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ರಾಜ್ಯ ಕಾರ್ಯಕಾರಿ ಸಮಿತಿಸದಸ್ಯರಾದ ಆರ್.ರವಿಕುಮಾರ್ ,ಜಗನ್ನಾಥ ಶೆಟ್ಟಿ ಬಾಳ, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ ಭಾಗವಹಿಸಲಿರುವರು.

11:00 ಗಂಟೆಯಿಂದ ಅಧಿಕಾರಿಗಳೊಂದಿಗೆ ಸಂವಾದ ದ.ಕ.ಜಿಲ್ಲಾಧಿಕಾರಿ ಡಾ.ಕೆ.ಎ.ರಾಜೇಂದ್ರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಬಳಿಕ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಅಪರಾಹ್ನ 3:00 ಗಂಟೆಗೆ ಸಮಾರೋಪ ಸಮಾರಂಭ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆಯಲಿರುವುದು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸಮಾರೋಪ ಭಾಷಣ ಮಾಡಲಿರುವರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಡಾ.ಭರತ್ ಶೆಟ್ಟಿ ವೈ, ಉಮಾನಾಥ ಎ. ಕೋಟ್ಯಾನ್, ರಾಜೇಶ್ ನಾಯ್ಕ ಯು, ವಿಧಾನ ಪರಿಷತ್ ಸದಸ್ಯ ರಾದ ಹರೀಶ್ ಕುಮಾರ್, ಬಿ.ಎಂ.ಫಾರೂಕ್, ತಾ.ಪಂ.ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ,ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ, ಮೆಸ್ಕಾಂ ಆಡಳಿತ ನಿರ್ದೇಶಕ ರಾದ ಪ್ರಶಾಂತ್ ಕುಮಾರ್ ಮಿಶ್ರಾ, ಅಧೀಕ್ಷಕ ಇಂಜಿನಿಯರ್ ಮಂಜಪ್ಪ, ಪುತ್ತೂರು ಎಎಸ್ಪಿ ಲಖನ್ ಸಿಂಗ್ ಯಾದವ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಕೆನರಾ ಬ್ಯಾಂಕ್ ನ ಮಹಾಪ್ರಬಂಧಕ ಯೋಗೀಶ್ ಆಚಾರ್ಯ, ಪೊಲೀಸ್ ವೃತ್ತನಿರೀಕ್ಷಕ ಉಮೇಶ್ ಉಪ್ಪಳಿಕೆ, ಜಿ.ಪಂ.ಸದಸ್ಯ
ಪಿ. ಪಿ. ವರ್ಗೀಸ್, ತಾ.ಪಂ.ಸದಸ್ಯೆ ಆಶಾ ಲಕ್ಷ್ಮಣ, ಕೊಂಬಾರು ಗ್ರಾ.ಪಂ.ಆಡಳಿತಾಧಿಕಾರಿ ಸಜಿ ಕುಮಾರ್, ಪ್ರಭಾರ ಪಿಡಿಒ ಪಿ. ರಾಘವೇಂದ್ರ ಗೌಡ, ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಿಳಿನೆಲೆ ಸಹಕಾರ ಸಂಘದ ಅಧ್ಯಕ್ಷ ದಾಮೋದರ ಗುಂಡ್ಯ, ಕೊಂಬಾರು ಎಸ್ ಡಿಎಂಸಿ ಅಧ್ಯಕ್ಷ ಶಿವಪ್ರಸಾದ್ ಭಾಗವಹಿಸಲಿದ್ದಾರೆ.

4:00 ಗಂಟೆಗೆ ಪತ್ರಕರ್ತರಿಂದ ಕ್ಷೇತ್ರ ಭೇಟಿ, ಪರಿಸರ ಅಧ್ಯಯನ ಊರಿನ ಹಿರಿಯರೊಂದಿಗೆ ಪತ್ರಕರ್ತರ ಚಾವಡಿ ಚರ್ಚೆ ನಡೆಯಲಿದೆ. ಈ ಬಾರಿ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ಜಿಲ್ಲೆಯ ಪತ್ರಕರ್ತರು ಪಾಲ್ಗೊಳ್ಳಲಿದ್ದಾರೆ.

ಈ ಬಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಯೋಗ ಗುರು ಡಾ.ಎಂ. ಜಗದೀಶ್ ಶೆಟ್ಟಿ ಬಿಜೈ ಅವರಿಂದ ‘ಯೋಗ ಪ್ರದರ್ಶನ’ , *ಖ್ಯಾತ ಜಾದೂಗಾರ ರಾಜೇಶ್ ಮಳಿ ಅವರಿಂದ ‘ಇಂದ್ರಜಾಲ ಪ್ರದರ್ಶನ’, *ಮಂಗಳೂರಿನ ಎ.ಜೆ.ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಎ.ಜೆ.ಆಸ್ಪತ್ರೆ ಯ ತಜ್ಞ ವೈದ್ಯರ ತಂಡದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ.
*ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ ಆಶ್ರಯದಲ್ಲಿ ರಕ್ತ ಗುಂಪು ವರ್ಗೀಕರಣ, ರಕ್ತದಾನ ಮತ್ತು ಜಾಗೃತಿ ಶಿಬಿರ.
*ಸ್ವಚ್ಛ ಪರಿಸರ, ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ.
*ಸರಕಾರದ ವಿವಿಧ ಇಲಾಖೆಗಳಿಗೆ ಸಂಬಂಧಿಸಿ ಗ್ರಾಮಸ್ಥರಿಂದ ಅರ್ಜಿಗಳ ಸ್ವೀಕಾರ.
* ಆಧಾರ್ ನೋಂದಣಿ , ತಿದ್ದುಪಡಿ ಸೌಲಭ್ಯ.
*ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
*ಪುತ್ತೂರು ಅಂಚೆ ವಿಭಾಗದ ಸಹಾಯಕ ಅಧೀಕ್ಷಕರಾದ ಜೋಸೆಫ್ ರೋಡ್ರಿಗಸ್ ಅವರು ಅಂಚೆ ಇಲಾಖೆಯ ವಿವಿಧ ಸವಲತ್ತುಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಗ್ರಾಮ ವಾಸ್ತವ್ಯ ಸಮಿತಿ ಸಿರಿಬಾಗಿಲು-ಕೊಂಬಾರು- ಸಂಯೋಜಕ ಭಾಸ್ಕರ ರೈ ಕಟ್ಟಾ ಮತ್ತಿತ್ತರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿರುವರು.

Comments are closed.