ಕರಾವಳಿ

ಪತ್ರಕರ್ತರ ಗ್ರಾಮ ವಾಸ್ತವ್ಯ: ಆರೋಗ್ಯ ಶಿಬಿರ ಹಾಗು ರಕ್ತದಾನ ಶಿಬಿರ ಉದ್ಘಾಟನೆ

Pinterest LinkedIn Tumblr

ಸುಳ್ಯ / ಕೊಂಬಾರು: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲ್ಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಡಬ ತಾಲೂಕಿನ ಕೊಂಬಾರಿನಲ್ಲಿ ಭಾನುವಾರ ನಡೆಯುತ್ತಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆಗೊಂಡಿತು.

ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹಾಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಉದ್ಘಾಟಿಸಿದರು.  ವಿವಿಧ ಇಲಾಖೆಗಳ ಸ್ಟಾಲ್ ಗಳನ್ನು ಉದ್ಘಾಟಿಸಲಾಯಿತು.

ಪುತ್ತೂರು ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಳ್, ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್, ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಹಾಗು ಇತರ ಅತಿಥಿಗಳನ್ನು ಪೂರ್ಣ ಕುಂಭ ಸ್ವಾಗತ ನೀಡಲಾಯಿತು.

Comments are closed.