ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳುವ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಸರಕಾರ ಮತ್ತು ಜನರನ್ನು ಹತ್ತಿರ ತರುವ ಕಾರ್ಯಕ್ರಮ ಎಂದು ದ.ಕ.ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಶ್ಲಾಘಿಸಿದ್ದಾರೆ.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಡಬ ತಾಲೂಕಿನ ಕೊಂಬಾರಿನಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅಭಿವೃದ್ಧಿಗೆ ಪೂರಕವಾದ ಈ ಗ್ರಾಮ ವಾಸ್ತವ್ಯ ರಾಜ್ಯಕ್ಕೆ ಮಾದರಿಯಾಗಿದೆ. ಇದರಿಂದ ಗ್ರಾಮಗಳ ಸಮಸ್ಯೆಗಳು ಬಗೆ ಹರಿಯಲಿದೆ. ಇಲಾಖೆಗಳು ಚುರುಕು ಪಡೆಯುತ್ತವೆ ಎಂದು ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಬಗ್ಗೆ ಎಸ್ ಪಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.