ಕರಾವಳಿ

ಬಾರ್ ರೆಸ್ಟೋರೆಂಟ್‌ನಲ್ಲಿ ಸ್ನೇಹಿತರೊಂದಿಗೆ ಕುಳಿತಿದ್ದ ಯುವತಿ ಮೇಲೆ ಹಳೆ ಸ್ನೇಹಿತನಿಂದ ಹಲ್ಲೆ ( ವಿಡಿಯೋ)

Pinterest LinkedIn Tumblr

ಮಂಗಳೂರು, ಫೆಬ್ರವರಿ.1: ಬಾರ್ ರೆಸ್ಟೋರೆಂಟ್ ವೊಂದರಲ್ಲಿ ಯುವತಿಯೋರ್ವಳು ತನ್ನ ಸ್ನೇಹಿತರೊಂದಿಗೆ ಕುಳಿತಿದ್ದಾಗ ಆಕೆಯ ಹಳೆ ಸ್ನೇಹಿತ ಮತ್ತು ಆತನ ಗೆಳೆಯರು ಏಕಾಏಕಿ ದಾಳಿ ಮಾಡಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಕದ್ರಿ ಸಮೀಪ ನಡೆದಿದೆ.

ಜ.30ರಂದು ಮಧ್ಯಾಹ್ನ ಕದ್ರಿಯ ಬಾರ್ ಆಯಂಡ್ ರೆಸ್ಟೋರೆಂಟ್ ವೊಂದರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಇದರ ಸಿಸಿಟಿವಿ ವಿಡಿಯೋ ತುಣುಕು ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆಗಿದೆ.

ಯುವತಿಯು ತನ್ನ ಮೂವರು ಗೆಳೆಯರೊಂದಿಗೆ ರೆಸ್ಟೋರೆಂಟ್ ನಲ್ಲಿ ಕುಳಿತಿದ್ದಾಗ ಏಕಾಏಕಿ ನುಗ್ಗಿದ ನಾಲ್ವರು ಯುವಕರ ತಂಡ ದಾಳಿ ನಡೆಸಿದೆ. ಹೋಟೆಲ್‌ನಲ್ಲಿ ಸಿಕ್ಕ ವಸ್ತುಗಳಿಂದ ಹೊಡೆದಾಟ ನಡೆಸಿದ್ದು, ಈ ವೇಳೆ ಓರ್ವ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ. ಯುವತಿಯೊಂದಿಗೆ ಇದ್ದ ಯುವಕ ಚೂರಿ ಇರಿತದಿಂದ ಗಾಯಗೊಂಡಿದ್ದಾನೆ.

ಈ ಬಗ್ಗೆ ಮಂಗಳೂರು ಪೂರ್ವ (ಕದ್ರಿ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.