(ಸಾಂದರ್ಭಿಕ ಚಿತ್ರ)
ಮಂಗಳೂರು, ಫೆಬ್ರವರಿ 03 : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾಉದ್ಯೋಗ ವಿನಿಮಯಕಛೇರಿ, ಮಂಗಳೂರು ಮತ್ತು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ ಪುರುಷ) ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟೀಯ ವೃತ್ತಿ ಸೇವಾ ಯೋಜನೆಯ ಮಾದರಿ ವೃತ್ತಿಕೇಂದ್ರದ ಅಡಿಯಲ್ಲಿ ಫೆಬ್ರವರಿ 06 ರಂದುಬೆಳಿಗ್ಗೆ 9.30 ಕ್ಕೆ ಕದ್ರಿಹಿಲ್ಸ್‍ನ ಸರ್ಕಾರಿಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು ದೂರವಾಣಿ ಸಂಖ್ಯೆ:0824-2457139ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.