ಕರಾವಳಿ

ಗಾಂಜಾ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪಿ ಸೆರೆ

Pinterest LinkedIn Tumblr

ಮಂಗಳೂರು, ಫೆಬ್ರವರಿ,03: ಮಂಗಳೂರಿನ ವೆಲೆನ್ಸಿಯ ಬಳಿ ಗಾಂಜಾ ಸೇವನೆ ಮಾಡಿ ಸಾರ್ವಜನಿಕ ರಿಗೆ ತೊಂದರೆಯಾಗುವಂತೆ ವರ್ತಿಸುತ್ತಿದ್ದ ಆರೋಪದಲ್ಲಿ ಓರ್ವ ಯುವಕನನ್ನು ಮಂಗಳೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸ್ಥಳೀಯ ನಿವಾಸಿ ಅಯ್ಮನ್ (19) ಎಂದು ಗುರುತಿಸಲಾಗಿದೆ.

ಇನ್‌ಸ್ಪೆಕ್ಟರ್ ರಾಮಕೃಷ್ಣ ಕೆ.ಕೆ. ಹಾಗೂ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಯುವಕ ಅಮಲು ಪದಾರ್ಥ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಯಾಗುವಂತೆ ವರ್ತಿಸುತ್ತಿದ್ದ ಎನ್ನಲಾಗಿದ್ದು, ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಂಗಳೂರಿನಲ್ಲಿ ನಾರ್ಕೋಟಿಕ್ ಮತ್ತು ಆರ್ಥಿಕ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Comments are closed.