ಉಡುಪಿ: ಮಣಿಪಾಲದ ರಸ್ತೆಯಲ್ಲಿ ನಡೆದು ಬರುತ್ತಿದ್ದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಂದು ಅಡ್ಡಗಟ್ಟಿ ಅವರಿಗೆ ಚಾಕು ತೋರಿಸಿ ಬೆದರಿಸಿ ಮೊಬೈಲ್, ವಾಚ್ ನಗದು ಹಣವನ್ನು ಸುಲಿಗೆ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ.


ಬಂಧಿತ ಆರೋಪಿಗಳನ್ನು ಆಶಿಫ್ (24) ಮತ್ತು ಮತ್ತು ದಸ್ತಗೀರ್ ಬೇಗ್ (24) ಎಂದು ಗುರುತಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಪ್ರಕರಣದ ಕುರಿತು ಮಾಹಿತಿ ನೀಡಿದರು.
ಆರೋಪಿಗಳು ಜ.31 ರಂದು ಮಣಿಪಾಲದ ಕೆ.ಎಫ್.ಸಿ ಹೋಟೆಲ್ ಬಳಿ ರಾತ್ರಿ ವೇಳೆಯಲ್ಲಿ ನಡೆದುಕೊಂಡು ಬರುತ್ತಿದ್ದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ಗಮನಿಸಿದ್ದು ತಮ್ಮ ಕಾರನ್ನು ದೂರದಲ್ಲಿ ನಿಲ್ಲಿಸಿ ಬಂದು
ಬೇರೆ ಯಾರೂ ಇಲ್ಲದೇ ಇರುವುದನ್ನು ಗಮನಿಸಿ ಸಿಗರೇಟ್ ಕೇಳುವ ನೆಪದಲ್ಲಿ ವಿದ್ಯಾರ್ಥಿನಿಯ ಬಳಿ ಬಂದು ಆಕೆಗೆ ಚಾಕು ತೋರಿಸಿ ಬೆದರಿಸಿ ಮೊಬೈಲ್, ವಾಚ್ ನಗದು ಹಣವನ್ನು ಸುಲಿಗೆ ಮಾಡಿದ್ದು, ಈ ಘಟನೆ ಮಣಿಪಾಲದ ವಿದ್ಯಾರ್ಥಿ ಮತ್ತು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ಇಲಾಖೆ ಆರೋಪಿಗಳ ಪತ್ತೆಗೆ ಅಡಿಷನಲ್ ಎಸ್ಪಿ ಕುಮಾರಚಂದ್ರ ಮತ್ತು ಡಿವೈಎಸ್ಪಿ ಸುಧಾಕರ ನಾಯಕ ಅವರ ಮೇಲುಸ್ತುವಾರಿಯಲ್ಲಿ ಆರೋಪಿತರನ್ನುಪತ್ತೆ ಮಾಡಲು ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ ಎಂ ನೇತೃತ್ವದಲ್ಲಿ ತಂಡವನ್ನು ರಚನೆ ಮಾಡಲಾಗಿತ್ತು ಎಂದು ಎಸ್ಪಿ ಹೇಳಿದರು.
ತನಿಖಾ ತಂಡದಲ್ಲಿ ಪಿಎಸ್ಐ ರಾಜಶೇಖರ ವಂದಲಿ, ಪ್ರೊಬೇಶನರಿ ಪಿ.ಎಸ್ಐ ನಿರಂಜನ್ ಗೌಡ ಮತ್ತು ದೇವರಾಜ ಬಿರದಾರ, ಎಎಸ್ಐ ಶೈಲೇಶ್ ಕುಮಾರ್ , ಹೆಡ್ ಕಾನ್ಸ್ಟೇಬಲ್ ಮಹೇಶ್ , ಅಬ್ದುಲ್ ರಾಜಾಕ್, ಥಾಮ್ಸನ್, ಪ್ರಸನ್ನ, ವಿಶ್ವಜಿತ್, ಕಾನ್ಸ್ಟೇಬಲ್ ಗಳಾದ ಮೊಹಮ್ಮದ್ ರಫೀಕ್, ಆದರ್ಶ ನಾಯ್ಕ ಹಾಗೂ ಸಿಡಿಆರ್ ಘಟಕದ ದಿನೇಶ್ ಮೊದಲಾದವರು ಮುಂಬೈ, ಥಾಣೆ, ಬೆಂಗಳೂರು, ಶಿವಮೊಗ್ಗದಲ್ಲಿ ತಿರುಗಾಡಿ ಆರೋಪಿಗಳನ್ನು ಭಾನುವಾರ ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿ ಆಸೀಫ್ ವಿರುದ್ದ ಈ ಹಿಂದೆ ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ಪಿ ವಿವರಿಸಿದರು. ಅಲ್ಲದೆ ಮಣಿಪಾಲದಲ್ಲಿ ರಾತ್ರಿ ವೇಳೆ ಸಂಚರಿಸುವಾಗ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಸೂಚನೆ ನೀಡಿದ್ದಾರೆ.
ಬಂಧಿತರಿಂದ ಕೃತ್ಯಕ್ಕೆ ಬಳಸಿದ ಹೋಂಡಾ ಸಿವಿಕ್ ಕಾರು, 2 ಮೊಬೈಲ್ ಮತ್ತು ಚಾಕುವನ್ನು
Comments are closed.