ಕರಾವಳಿ

ಉಪ ಮುಖ್ಯ ಮಂತ್ರಿಗಳಿಂದ ಸುಬ್ರಹ್ಮಣ್ಯ-ಉಡುಪಿ ರಾಜ್ಯ ಹೆದ್ದಾರಿ ಚತುಷ್ಪಥ ರಸ್ತೆ ಲೋಕಾರ್ಪಣೆ

Pinterest LinkedIn Tumblr

ಮಂಗಳೂರು, ಫೆಬ್ರವರಿ 07 : ಲೋಕೋಪಯೋಗಿ ಇಲಾಖೆ ವತಿಯಿಂದ ಬೆಳ್ತಂಗಡಿ ತಾಲೂಕಿನ ಸುಬ್ರಹ್ಮಣ್ಯ-ಉಡುಪಿ ರಾಜ್ಯ ಹೆದ್ದಾರಿ( ಎಸ್.ಹೆಚ್-37) ಯ ಕಿ.ಮೀ 52.00 ರಿಂದ 55.00 ವರೆಗೆ ಅಂದಾಜು ಮೊತ್ತ ರೂ. 1500 ಲಕ್ಷಗಳಲ್ಲಿ ನಿರ್ಮಾಣಗೊಂಡ ಚತುಷ್ಪಥ ರಸ್ತೆಯನ್ನು ರವಿವಾರ ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ. ವೀರೆಂದ್ರ ಹೆಗ್ಗಡೆ ರವರ ದಿವ್ಯ ಉಪಸ್ಥಿತಿಯಲ್ಲಿ ಉಪ ಮುಖ್ಯಮಂತ್ರಿಗಳು, ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಗೋವಿಂದ ಎಂ. ಕಾರಜೋಳ ರವರು ಲೋಕಾರ್ಪಣೆ ಮಾಡಿದರು.

ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ,ಹಾಗೂ ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವ ಅಂಗಾರ ಎಸ್. ಘನ ಉಪಸ್ಥಿತರಿದ್ದರು. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಪ್ರತಾಪ್ ಸಿಂಹ ನಾಯಕ್, ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಬೆಳ್ತಂಗಡಿ ತಾಲೂಕು ಪಂಚಾಯತ್ ಅಧ್ಯಕ್ಷೆ ದಿವ್ಯ ಜ್ಯೋತಿ, ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ಹಾಗೂ ಮತ್ತಿತರ ಜನಪ್ರತಿನಿಧಿಗಳು ಉಪಸ್ಥಿತರಿದರು.

Comments are closed.