ಕರಾವಳಿ

ಅಪ್ರಾಪ್ತೆ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ: ಪೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ

Pinterest LinkedIn Tumblr

ಉಡುಪಿ: ಕೋಟ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೋ ಪ್ರಕರಣ ಬೆಳಕಿಗೆ ಬಂದಿದ್ದು ಉಡುಪಿ ಮಹಿಳಾ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.

ಉಡುಪಿಯ ಮಕ್ಕಳ ಸಹಾಯವಾಣಿಗೆ ಬಂದ ದೂರಿನನಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇದರ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ಮತ್ತು ರಕ್ಷಣಾಧಿಕಾರಿ (ಅಸಾಂಸ್ಥಿಕ ) ಕಪಿಲಾ ಇವರು ಸಂತ್ರಸ್ತ ಬಾಲಕಿಯ ಮನೆಗೆ ಭೇಟಿ ನೀಡಿ ವಿಚಾರಿಸಿದಾಗ ಸಂಬಂಧಿಯಾಗಿರುವ 27 ವರ್ಷ ಪ್ರಾಯದ ಯುವಕ ಮದುವೆ ಆಗುವುದಾಗಿ ನಂಬಿಸಿ ಮದುವೆ ಮುಂಚೆ ದೈಹಿಕ ಹಿಂಸೆ ನೀಡಿರುದಾಗಿ ತಿಳಿಸಿದ್ದಾಳೆ. ಅಪ್ರಾಪ್ತ ವಯಸ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸುವಂತೆ ಕಾನೂನು ಪರಿವೀಕ್ಷಣಾಧಿಕಾರಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಮಹಿಳಾ ಠಾಣಾ ಪ್ರಭಾರ ಇನ್ಸ್‌ಪೆಕ್ಟರ್ ಮಂಜಪ್ಪ ಅವರ ಮಾರ್ಗದರ್ಶನದಲ್ಲಿ ಉಪ ನಿರೀಕ್ಷಕಿ ವೈಲೆಟ್ ಫೆಮಿನಾ ದೂರು ದಾಖಲಿಸಿಕೊಂಡಿದ್ದು ಆರೋಪಿಯನ್ನು ಬಂಧಿಸಲಾಗಿದೆ.

ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಕೋಟ ಪೊಲೀಸ್ ಠಾಣೆ ಸಹಾಯಕ ಉಪ ನಿರೀಕ್ಷಕಿ ಮುಕ್ತಾ ಅವರು ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಹಾಗೂ ಸ್ಥಳೀಯರಿಗೆ ಪೋಕ್ಸೋ ಮತ್ತು ಬಾಲ್ಯ ವಿವಾಹ ತಡೆ ಕಾಯ್ದೆ ಬಗ್ಗೆ ಅರಿವು ಮೂಡಿಸಿದರು.

Comments are closed.